ಸಿಎಂ ತವರು ಜಿಲ್ಲೆಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ


ಸಿಎಂ ತವರು ಜಿಲ್ಲೆಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ


ಮಹದಾಯಿ ಸಮಸ್ಯೆ ಇತ್ಯರ್ಥಕ್ಕಾಗಿ ಕನ್ನಡ ಪರ ಸಂಘಟನೆಗಳು ಕರೆಕೊಟ್ಟಿರುವ ಬಂದ್ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ತೊಡೆ ತಟ್ಟಲು ಬಿಜೆಪಿ ಪರಿವರ್ತನಾ ಯಾತ್ರೆ ಇದೇ 25ರಂದು ನಡೆಸಲು ಉದ್ದೇಶಿಸಿರುವ ಬಿಜೆಪಿ ಸಿದ್ಧತಕಾರ್ಯ ಭರದಿಂದ ನಡೆಯುತ್ತಿದೆ.

      ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಚಾಮುಂಡೇಶ್ವರಿ ಕ್ಷೇತ್ರ, ಕೃಷ್ಣರಾಜ, ಚಾಮರಾಜ ಮತ್ತು ನರಸಿಂಹರಾಜ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಕಾರ್ಯಕರ್ತರ ಮತ್ತು ಬಿಜೆಪಿ ಅಭಿಮಾನಿಗಳ ಸಮಾವೇಶ ನಡೆಯಲಿದ್ದು, 50ಸಾವಿರ ಮಂದಿ ಕಾರ್ಯಕರ್ತರನ್ನು ಸೇರಿಸುವ ಮೂಲಕ ಸಿಎಂ ತವರು ಜಿಲ್ಲೆಯಲ್ಲಿ ಶಕ್ತಿ ಪ್ರದರ್ಶಿಸಲು ಬಿಜೆಪಿ ಸಜ್ಜಾಗಿದೆ.

       ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೇಂದ್ರದ ಮಾಜಿ ಸಚಿವ ಹಾಗೂ ಕರ್ನಾಟಕದ ಹಿರಿಯ ರಾಜಕಾರಣಿ ಎಸ್,ಎಂ, ಕೃಷ್ಣ,     ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತಕುಮಾರ್, ಸದಾನಂದ ಗೌಡ, ಅನಂತ್ ಕುಮಾರ್ ಹೆಗಡೆ, ರಮೇಶ್ ಜಿಗಜಿಣಗಿ, ಸಂಸದರು, ಶಾಸಕರು ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.

    ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೊದಲ ಬಾರಿಗೆ ಮೈಸೂರಿಗೆ ಆಗಮಿಸುತ್ತಿದ್ದಾರೆ. ಅದಕ್ಕಾಗಿ ಬೇಕಾದ ಸಿದ್ಧತೆ ಆರಂಭಿಸಲಾಗಿದೆ. ಅಂದು ಪಕ್ಷದ ಕಾರ್ಯಕರ್ತರು ನಗರದ ನಾನಾ ಭಾಗಗಳಿಂದ ಮೆರವಣಿಗೆ ಮೂಲಕ ಮಹಾರಾಜ ಕಾಲೇಜು ಮೈದಾನಕ್ಕೆ ಆಗಮಿಸಲಿದ್ದು, ಇದೇ ಸಂದರ್ಭದಲ್ಲಿ ವಿವಿಧ ಪಕ್ಷದ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.
      
      ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ,ಎಸ್, ಯಡಿಯೂರಪ್ಪ ತವರು ಜಿಲ್ಲೆ ಶಿವಮೊಗ್ಗದಲ್ಲಿ ಕಾಂಗ್ರೆಸ್ ಸದನ ಸಮಾವೇಶದಲ್ಲಿ ಶಕ್ತಿ ಪ್ರದರ್ಶಿಸಿದ್ದರು. ಇದಕ್ಕೆ ತಿರುಗೇಟು ಎಂಬಂತೆ ಮೈಸೂರಿನಲ್ಲಿ ಬಿಜೆಪಿ ಭಾರಿ ಸಮಾವೇಶ ನಡೆಸಿ ಸಿಎಂಗೆ ಬಿಸಿ ಮುಟ್ಟಿಸಲು ಮುಂದಾಗಿದೆ.

        ಆದರೆ ಬಿಜೆಪಿಯ ಉದ್ದೇಶಿತ ಪರಿವರ್ತನಾ ಯಾತ್ರೆಗೆ ಅಂದು ಕನ್ನಡ ಪರ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್ ನಿಂದಾಗಿ ಪರಿವರ್ತನಾ ಯಾತ್ರೆ ಯಶಸ್ವಿಯಾಗಿ ನಡೆಯುವುದೇ ಎಂಬ ಯಕ್ಷ ಪ್ರಶ್ನೆ ಎದುರಾಗಿದೆ.

        ಒಂದೆಡೆ ಸಂಘಟನೆಗಳು ಕರ್ನಾಟಕ ಬಂದ್ ಮಾಡಲೇಬೇಕೆಂಬ ಹಠಕ್ಕೆ ಬಿದ್ದಿದ್ದಾರೆ, ಬಿಜೆಪಿ ಯಾತ್ರೆಯನ್ನು ಯಶಸ್ವಿಯಾಗಿ ನಡೆಸಲು ಪಣ ತೊಟ್ಟಿದೆ. ಖುದ್ದು ರಾಷ್ಟ್ರೀಯ ಅಧ್ಯಕ್ಷರೇ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುಜುಗರಕ್ಕೆ ಒಳಗಾಗದಂತೆ ಎಚ್ಚರಿಕೆ ಹೆಜ್ಜೆ ಇಡಲಾಗಿದೆ.

Comments

Popular posts from this blog

PMBJK ಹೊಸ ದೂರ ನೀತಿಗೆ ಮಾಲೀಕರ ತೀವ್ರ ಆಕ್ಷೇಪ – ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

RACE FOR 7: BANGALORE WALKS FOR RARE DISEASES