ಚುನಾವಣೆಗೆ ಮುಹೂರ್ತ ಫಿಕ್ಸ್

ಚುನಾವಣೆಗೆ ಮುಹೂರ್ತ ಫಿಕ್ಸ್ 

ಇಂದಿನಿಂದಲೇ  ಚುನಾವಣಾ ನೀತಿ ಸಂಹಿತೆ ಜಾರಿ    


    ರಾಜ್ಯ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಮೇ 12 ರಂದು ಒಂದೇ  ಹಂತದಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ದೆಹಲಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣೆ ಆಯುಕ್ತ ಓಂ ಪ್ರಕಾಶ್ ರಾವತ್, 2018ರ ರಾಜ್ಯ ವಿಧಾನಸಭೆ ಚುನಾವಣೆಯ ಅಧಿಸೂಚನೆಯನ್ನು ಪ್ರಕಟಿಸಿದರು. ಇಂದಿನಿಂದಲೇ ನೀತಿ ಸಂಹಿತಿ ಜಾರಿಗೆ ಬರಲಿದೆ. ಏಪ್ರಿಲ್ 17ರಂದು ಚುನಾವಣಾ ಅಧಿಸೂಚನೆ ಪ್ರಕಟ

  1. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 24 ಕೊನೆಯ ದಿನ.
  2. ಏಪ್ರಿಲ್ 25ರಂದು ನಾಮಪತ್ರಗಳ ಪರಿಶೀಲನೆ.
  3. ಏಪ್ರಿಲ್ 27 ನಾಮಪತ್ರ ಹಿಂಪಡೆಯಲು ಕೊನೆಯ ದಿನ.
  4. ರಾಜ್ಯದಲ್ಲಿ ಮೇ 12ರಂದು ಒಂದೇ ಹಂತದಲ್ಲಿ ಮತದಾನ.
  5. ಮೇ 15ರಂದು ವಿಧಾನಸಭೆ ಚುನಾವಣೆ ಫಲಿತಾಂಶ  ಪ್ರಕಟವಾಗಲಿದೆ.
   ಇನ್ನು ಚುನಾವಣಾ ನೀತಿ ಸಂಹಿತೆ ಇಂದಿನಿಂದಲೇ ಜಾರಿಗೆ ಬರಲಿದ್ದು, ಓರ್ವ ಅಭ್ಯರ್ಥಿಗೆ ಚುನಾವಣಾ ವೆಚ್ಚದ ಮಿತಿಯನ್ನು ಚುನಾವಣಾ ಆಯೋಗ  ₹28 ಲಕ್ಷಕ್ಕೆಮಿತಿಗೊಳಿಸಿದೆ
    
      ರಾಜ್ಯ ಚುನಾವಣಾ ಆಯೋಗ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಪಾರದರ್ಶಕವಾಗಿ ಚುನಾವಣೆ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ನ್ಯಾಯಸಮ್ಮತ ಹಾಗೂ ನಿರ್ಭೀತಿಯಿಂದ ಜನರು ತಮ್ಮ ಹಕ್ಕು ಚಲಾಯಿಸುವ ಬಗ್ಗೆ ಈಗಾಗಲೆ ಎಲ್ಲಾ ಜಿಲ್ಲೆಗಳಲ್ಲಿ ಅಲ್ಲಿನ ಅಧಿಕಾರಿಗಳ ನೆರವಿನಿಂದ ಜಾಗೃತಿ ಮೂಡಿಸಿದ್ದಾರೆ.

Comments

Popular posts from this blog

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಇಲ್ಲಿದೆ ವಿವರ

ಬಿಬಿಎಂಪಿ ನಿವೃತ್ತಿಯಾದ ಅಧಿಕಾರಿ ಹಾಗೂ ನೌಕರರಿಗೆ ಗೌರವ ಸನ್ಮಾನ

ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಪರ ಸಚಿವ ಕೆ.ಗೋಪಾಲಯ್ಯ ರೋಡ್ ಶೋ