ಸಕಲೇಶಪುರ ಆಲೂರು ಕಟ್ಟಾಯ ಮೀಸಲು ವಿಧಾನಸಭಾ ಕ್ಷೇತ್ರ


ಸಕಲೇಶಪುರ ಆಲೂರು ಕಟ್ಟಾಯ ಮೀಸಲು ವಿಧಾನಸಭಾ ಕ್ಷೇತ್ರ


   ಸಕಲೇಶಪುರ ಆಲೂರು ಕಟ್ಟಾಯ ಮೀಸಲು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಥಳೀಯರಾದ ಶ್ರೀ ಪರ್ವತಯ್ಯ ಅವರಿಗೆ ಅವಕಾಶ ಕಲ್ಪಿಸುವಂತೆ  ಒತ್ತಾಯಿಸಿ ತಾಲೂಕು ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ  ಪತ್ರಿಕಾಗೋಷ್ಠಿ ನಡೆಸಿದರು

     ಹಸನ ಜಿಲ್ಲಾ ಸಕಲೇಶಪುರ-ಆಲೂರು-ಕಟ್ಟಾಯ ಮೀಸಲು ವಿಧಾನಸಭಾ ಕ್ಷೇತ್ರವಾಗಿದ್ದು ಈ ಕ್ಷೇತ್ರದಲ್ಲಿ ಸುಮಾರು ಒಂದು ಲಕ್ಷದ ತೊಂಬತ್ತೈದು ಸಾವಿರ ಮತದಾರರಲ್ಲಿ ಸುಮಾರು ಅರವತ್ತೈದು ಸಾವಿರ ದಲಿತ ಮತದಾರರನ್ನು ಹೊಂದಿರುವ ಕ್ಷೇತ್ರವಾಗಿದೆ ಈ ಕ್ಷೇತ್ರದಲ್ಲಿ ಅನೇಕ ಮೂಲಭೂತ ಸಮಸ್ಯೆಗಳು ಕಾಣುತ್ತಿದ್ದು ಈ ಬಗ್ಗೆ ಕ್ಷೇತ್ರದ ಸಮಸ್ಯೆಯ ಬಗ್ಗೆ ಅರಿವಿಲ್ಲದವರೂ ಮತ್ತು ಸ್ಥಳೀಯರಲ್ಲದ ವ್ಯಕ್ತಿಗಳು ಚುನಾವಣೆಯಲ್ಲಿ ಸ್ಪರ್ದಿಸಲು ಬರುತ್ತಿದ್ದಾರೆ.
 ಈ ಕ್ಷೇತ್ರದ ಮತದಾರರು ಸ್ಥಳೀಯ ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಬೆಂಬಲಿಸಲು ತೀರ್ಮಾನಿಸಿರುವಂತೆ ಈ ಬಾರಿ ಕಾಂಗ್ರೆಸ್ ಪಕ್ಷದಲ್ಲಿ ಸ್ಥಳೀಯ ಅಭ್ಯರ್ಥಿಗೆ ಅವಕಾಶ ಕಲ್ಪಿಸುವಂತೆ ತಾಲ್ಲೂಕಿನ ಎಲ್ಲ ದಲಿತ ಸಂಘಟನೆಗಳು ಪ್ರಗತಿಪರ ಸಂಘಟನೆಗಳು ಬೆಂಬಲಿಸಲು ತೀರ್ಮಾನಿಸುತ್ತದೆ ಈ ಬಾರಿ ಕಾಂಗ್ರೆಸ್ ಪಕ್ಷದಲ್ಲಿ ಸ್ಥಳೀಯ ಬಲಗೈ ಸಮುದಾಯದ ಅಭ್ಯರ್ಥಿಗೆ ಅವಕಾಶ ಕಲ್ಪಿಸುವಂತೆ ರಾಜ್ಯ ನಾಯಕರಲ್ಲಿ ಮತ್ತು ಸ್ಥಳೀಯ ಮುಖಂಡರಲ್ಲಿ ಅನೇಕ ಬಾರಿ ಒತ್ತಾಯ ಮಾಡಿರುತ್ತೇವೆ ಒಂದು ವೇಳೆ ಈ ಬಾರಿ ಸ್ಥಳೀಯರಲ್ಲದ ವ್ಯಕ್ತಿಗಳಿಗೆ ಮತ್ತು ಕ್ಷೇತ್ರದ ಅರಿವಿಲ್ಲದವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಬಾರದೆಂದು ದಲಿತ ಸಂಘಟನೆಗಳು ಮತ್ತು ಎಲ್ಲ ಪ್ರಗತಿಪರ ಸಂಘಟನೆಗಳು ಎಂದು ಒತ್ತಾಯಿಸುತ್ತಿದ್ದೇವೆ
      ಈಗಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಸ್ಥಳೀಯ ಆಕಾಂಕ್ಷಿಯಾಗಿರುವ ಬೆಳಗೋಡು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು ಕಾಫಿ ಬೆಳೆಗಾರರಾದ ಶ್ರೀ ಪರ್ವತಯ್ಯ ನವರು ಕ್ಷೇತ್ರದ ಎಲ್ಲ ಜಾತಿ ವರ್ಗದ ಪ್ರೀತಿ ವಿಶ್ವಾಸವನ್ನು ಗಳಿಸಿರುವ ಇವರನ್ನು ಕಾಂಗ್ರೆಸ್ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕಲ್ಪಿಸುವಂತೆ ಎಐಸಿಸಿ ನಾಯಕರಾದ ಶ್ರೀ ರಾಹುಲ್ ಗಾಂಧಿಯವರು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರಲ್ಲಿ ರಾಜ್ಯಾಧ್ಯಕ್ಷರ ದಂತಹ ಡಾ ಜಿ ಪರಮೇಶ್ವರ್ ರವರಲ್ಲಿ ಲೋಕಸಭಾ ನಾಯಕರಂತಹ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಹಾಗೂ ರಾಜ್ಯ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರಾದ ಶ್ರೀ ಡಿಕೆ ಶಿವಕುಮಾರ್ ಅವರಲ್ಲಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಯುತ ಹೇ ಮಂಜೂರು ಅವರಲ್ಲಿ ಸಕಲೇಶಪುರ ದಲಿತ ಸಂಘಟನೆಗಳ ಒಕ್ಕೂಟ ಪತ್ರಿಕಾಗೋಷ್ಠಿ ಮೂಲಕ ಒತ್ತಾಯಿಸುತ್ತಿದ್ದೇವೆ ಎಂದು ಒಕ್ಕೂಟದ ಸದಸ್ಯರು ತಿಳಿಸಿದರು.

Comments

Popular posts from this blog

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಇಲ್ಲಿದೆ ವಿವರ

ಬಿಬಿಎಂಪಿ ನಿವೃತ್ತಿಯಾದ ಅಧಿಕಾರಿ ಹಾಗೂ ನೌಕರರಿಗೆ ಗೌರವ ಸನ್ಮಾನ

ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಪರ ಸಚಿವ ಕೆ.ಗೋಪಾಲಯ್ಯ ರೋಡ್ ಶೋ