ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಸರ್ಕಾರದ  ವಿರುದ್ಧ ಕಾಂಗ್ರೆಸ್ ಪ್ರತಿಭಟನೆ


   ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕೇಂದ್ರದ ತನಿಖಾ ತಂಡಗಳನ್ನು ಬಳಸಿಕೊಂಡು ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಸೇಡು ತೀರಿಸಿಕೊಳ್ಳುವ ಕಾರ್ಯ ಮಾಡುತ್ತಿದ್ದಾರೆ ಎಂದು  ಆರೋಪಿಸಿ  ರಾಜ್ಯ ಕಾಂಗ್ರೆಸ್ ನಾಯಕರು  ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು.
     ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಕಾಂಗ್ರೆಸ್ ಮುಖಂಡ ಎಸ್. ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
       ಮನೋಹರ್ ಮಾತನಾಡಿ, ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯ, ಸಿಬಿಐ ಬಳಸಿಕೊಂಡು ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ದಾಳಿ ಮಾಡಿಸಿ, ಸೇಡು ತೀರಿಸಿಕೊಳ್ಳುವ ಯತ್ನ ಮಾಡಿತ್ತಿದೆ. ಇಂದು ನಮ್ಮ ನಾಯಕರಾದ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ ವಿರುದ್ಧ ಸಿಬಿಐ ದಾಳಿಗೆ ಮುಂದಾಗಿರುವ  ವಿಷಯ ತಿಳಿದಿದೆ. ಇದರ ವಿರುದ್ಧ ಅವರು ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ನಮ್ಮ ನಾಯಕರ ವಿರುದ್ಧ ಕೇಂದ್ರ ಸರ್ಕಾರಸೇಡಿನ ರಾಜಕಾರಣ ಮಾಡುವುದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದರು.
         ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿಶ್ ಷಾ ಮೋಡಿ ರಾಜರಾಜೇಶ್ವರಿ ನಗರ ದಲ್ಲಿ ನಡೆದಿಲ್ಲ. ಮುನಿರತ್ನ ಗೆದ್ದಿದ್ದಾರೆ. ಇವರ ಅರ್ಧದಷ್ಟು ಮತವನ್ನು ಕೂಡ ಬಿಜೆಪಿ, ಜೆಡಿಎಸ್ ಸೇರಿ ಪಡೆದಿಲ್ಲ. ಸಿದ್ದರಾಮಯ್ಯ ನವರಜನಪರ ಕಾರ್ಯಕ್ಕೆ ಮತದಾರರು ಇನ್ನೊಂದು ಗೆಲುವಿನ ಉಡುಗೊರೆ ನೀಡಿದ್ದಾರೆ ಎಂದರು.

Comments

Popular posts from this blog

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಇಲ್ಲಿದೆ ವಿವರ

ಬಿಬಿಎಂಪಿ ನಿವೃತ್ತಿಯಾದ ಅಧಿಕಾರಿ ಹಾಗೂ ನೌಕರರಿಗೆ ಗೌರವ ಸನ್ಮಾನ

ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಪರ ಸಚಿವ ಕೆ.ಗೋಪಾಲಯ್ಯ ರೋಡ್ ಶೋ