ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಆಡಳಿತ ಮಂಡಳಿಯ ವಿರುದ್ದ ನೌಕರರ ಧರಣಿ ಸತ್ಯಾಗ್ರಹ
ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಆಡಳಿತ ಮಂಡಳಿಯ ವಿರುದ್ದ ನೌಕರರ ಧರಣಿ ಸತ್ಯಾಗ್ರಹ ಬೆಂಗಳೂರು, ಜುಲೈ 09, 2018: ತಮಿಳುನಾಡು ಮೂಲಕ ಆಡಳಿತ ಮಂಡಳಿಯ ಅಧೀನದಲ್ಲಿರುವ ಬೆಂಗಳೂರಿನ ಕೆಂಗೇರಿ ರಸ್ತೆಯಲ್ಲಿರುವ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಆಡಳಿತ ಮಂಡಳಿ ನೌಕರರ ಮೇಲೆ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿ ಇಂದು ನೂರಕ್ಕೂ ಹೆಚ್ಚು ಸಿಬ್ಬಂದಿಗಳು ಧರಣಿ ಸತ್ಯಾಗ್ರಹವನ್ನು ನಡೆಸಿದರು. ನಗರದ ಮೌರ್ಯ ವೃತ್ತದ ಬಳಿ ಇರುವ ಗಾಂದಿ ಪ್ರತಿಮೆಯ ಬಳಿ ನಡೆದ ಪ್ರತಿಭಟನೆಯ ನೇತೃತ್ವವನ್ನು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಅಧ್ಯಕ್ಷರಾದ ಡಾ ವೆಂಟಕಸ್ವಾಮಿ, ಆರ್ ಆರ್ ಎಂ ಸಿ ಹೆಚ್ ಯೂನಿಯನ್ ಗೌರವ ಅಧ್ಯಕ್ಷರಾದ ಡಾ. ಸಿ ಎಸ್ ರಘು ವಹಿಸಿದ್ದರು. ಪ್ರತಿಭಟನೆಯ ನೇತೃತ್ವವನ್ನು ವಹಿಸಿದ್ದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಅಧ್ಯಕ್ಷರಾದ ಡಾ ವೆಂಟಕಸ್ವಾಮಿ ಮಾತನಾಡಿ, 350 ಕ್ಕೂ ಹೆಚ್ಚು ಸಂಖ್ಯೆಯಲ್ಲಿರುವ ಮೇಲೆ ಆಡಳಿತ ಮಂಡಳಿ ಮೊದಲಿನಿಂದಲೂ ಕೂಡಾ ದೌರ್ಜನ್ಯವನ್ನು ನಡೆಸುತ್ತಿದೆ. 8 ರಿಂದ 10 ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ನೌಕರರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ನೌಕರರ ಸಂಘ ಕಟ್ಟಿದ್ದೇ ತಪ್ಪಾಗಿದೆ, ಸಂಘದ ಮ...