ಮಹಿಳಾ ಕಾಂಗ್ರೆಸ್ ಇಂದಿರಾ ಗಾಂಧಿ

ಮಹಿಳಾ ಕಾಂಗ್ರೆಸ್ ವತಿಯಿಂದ ಇಂದಿರಾಗಾಂಧಿ ಜಯಂತಿ *'ಇಂದಿರಾ ಜ್ಯೋತಿ'* ಹೆಸರಿನಲ್ಲಿ ಬಡ ವಿದ್ಯಾರ್ಥಿನಿಯರಿಗೆ ಸೋಲಾರ್ ದೀಪ ವಿತರಣ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಭಾರತ ದೇಶದ ಪ್ರಥಮ ಮಹಿಳಾ ಪ್ರಧಾನಿ, ಉಕ್ಕಿನ ಮಹಿಳೆ ಶ್ರೀಮತಿ ಇಂದಿರಾ ಗಾಂಧಿಯವರ 103 ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ 'ಇಂದಿರಾ ಜ್ಯೋತಿ' ಎನ್ನುವ ರಾಜ್ಯವ್ಯಾಪಿ ಚಾಲನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮಾಜಿ ಮುಖ್ಯಮಂತ್ರಿಗಳು ಹಾಗು ವಿರೋಧ ಪಕ್ಷದ ನಾಯಕರೂ ಆದ ಶ್ರೀ ಸಿದ್ಧರಾಮಯ್ಯ ರವರು ಈ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಈ ವೇಳೆ ಬಡ ವಿದ್ಯಾರ್ಥಿನಿಯರಿಗೆ ಸೋಲಾರ್ ದೀಪಗಳನ್ನು ವಿತರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯನವರು ಈ ಸೋಲಾರ್ ದೀಪಗಳನ್ನು ಕೊಡುವುದರಿಂದ ಗ್ರಾಮೀಣ ಭಾಗದ ಹೆಣ್ಣುಮಕ್ಕಳಿಗೆ ಅನುಕೂಲವಾಗುತ್ತದೆ ಮತ್ತು ಇಂದಿನ ಯುವ ಪೀಳಿಗೆಗೆ ಇಂದಿರಾಜಿ ಅವರನ್ನು ಪರಿಚಯಿಸುವಂತಹ ಕಾರ್ಯಕ್ರಮ. ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಮಸ್ಯೆ ಇರುವುದರಿಂದ, ನಾನು ಚಿಕ್ಕವನಿದ್ದಾಗ ಬೀದಿ ದೀಪದಲ್ಲಿ ಓದುತ್ತಿದ್ದೆ, ಸೀಮೆಎಣ್ಣೆ ದೀಪದಲ್ಲಿ ಓದುತ್...