ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.‌ ಗೋಪಾಲಯ್ಯ ಪ್ರಚಾರ

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಕೆ.‌ ಗೋಪಾಲಯ್ಯ ಪ್ರಚಾರ


ಬೆಂಗಳೂರು : ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.‌ಗೋಪಾಲಯ್ಯ ರವರು ಇಂದು 68 ನೇ ವಾರ್ಡ್ ನ ಶ್ರೀರಾಮನಗರದ  ಗೆಳೆಯರ ಬಳಗ ರಸ್ತೆಯಲ್ಲಿ ಮನೆ ಮನೆಗೆ ತೆರಳಿ ಅಭಿವೃದ್ಧಿಗೆ ಮತ ನೀಡಿ ಎಂದು ಮತಯಾಚನೆ ನಡೆಸಿದರು.


ಪ್ರಧಾನಿ ನರೇಂದ್ರ ಮೋದಿ ರವರು ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ಮಾಡಿದ್ದಾರೆ. ಒಂದು ಲಕ್ಷಕ್ಕಿಂತ ಹೆಚ್ಚಿನ ಜನರು ಅವರನ್ನ ಹತ್ತಿರದಿಂದ ಬಂದು ನೋಡಿ ಕಣ್ತುಂಬಿ ಕೊಂಡಿದ್ದಾರೆ ಎಂದರು.

ಕ್ಷೇತ್ರದ ಜನತೆ ಅತ್ಯಂತ ಯಶಸ್ವಿಯಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಸ್ವಾಗತ ಮಾಡಿದರು.ನನ್ನ ಕ್ಷೇತ್ರದ ಜನತೆಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.

270 ಬೂತ್ ನಲ್ಲೂ ನಮ್ಮ ಮುಖಂಡರು ಹಾಗೂ ಸ್ಥಳೀಯ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಈ ಬಾರಿ  ಕ್ಷೇತ್ರದ ಜನತೆ ಹೆಚ್ಚಿನ ಬಹುಮತದೊಂದಿಗೆ ಗೆಲ್ಲಿಸುತ್ತಾರೆ ಎಂಬ ನಂಬಿಕೆ ಇದೆ ಎಂದರು.

ಬೆಂಗಳೂರಿನಲ್ಲಿ ಪ್ರಧಾನಿ ಮೋದಿಯವರ ರೋಡ್ ಶೋ ಆಗಿದೆ. ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳು,ವಿಶ್ವ ನಾಯಕ ಪ್ರಧಾನಿ ಮೋದಿಯವರ ನಾಯಕತ್ವ ಅವರ ಕೊಡುಗೆ ಅಪಾರ ಎಂದರು.

ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿ ಅಧಿಕಾರಕ್ಕೆ ಬರಬೇಕಂತ ಜನರ ಬಯಕೆಯಿದೆ. ಬೆಂಗಳೂರಿನಲ್ಲಿ 20ಕ್ಕಿಂತ ಹೆಚ್ಚಿನ ಸ್ಥಾನ  ಗೆಲ್ಲುತ್ತೇವೆ ಎಂಬ ಸಂಪೂರ್ಣ ವಿಶ್ವಾಸವಿದೆ.ರಾಜ್ಯದ ಹಾಗೂ ಬೆಂಗಳೂರಿನ‌ ಜನ ಆಶೀರ್ವಾದ ಮಾಡ್ತಾರೆ. 140 ಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಭರವಸೆ ಇದೆ ಎಂದು ತಿಳಿಸಿದರು.

 

ಇದೇ ಸಂದರ್ಭದಲ್ಲಿ ನೆಲ ನರೇಂದ್ರಬಾಬು, ಓಬಿಸಿ ರಾಜ್ಯಾಧ್ಯಕ್ಷ ನರೇಂದ್ರಬಾಬು, ಡಾ. ಗಿರೀಶ್ ನಾಶಿ, ನಾಗರಾಜ್ ಡಿ. ರೈಲ್ವೆ ನಾರಾಯಣ್ ಹಾಗೂ ಸ್ಥಳೀಯ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Comments

Popular posts from this blog

PMBJK ಹೊಸ ದೂರ ನೀತಿಗೆ ಮಾಲೀಕರ ತೀವ್ರ ಆಕ್ಷೇಪ – ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

RACE FOR 7: BANGALORE WALKS FOR RARE DISEASES