Posts

Showing posts from February, 2026

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಿಂದ ಬಾಲಕನ ಮೇಲೆ ಹಲ್ಲೆ ಆರೋಪ

Image
ಬೆಂಗಳೂರು: ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀನಿವಾಸನಗರದಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ಐದು ವರ್ಷದ ಬಾಲಕನ ಮೇಲೆ ಶಿಕ್ಷಕಿಯೊಬ್ಬರು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಪೋಷಕರ ಹೇಳಿಕೆಯ ಪ್ರಕಾರ, ಶ್ರೀ ಕನಕ ಇಂಗ್ಲಿಷ್ ಸ್ಕೂಲ್‌ನಲ್ಲಿ ಓದುತ್ತಿರುವ ಬಾಲಕನಿಗೆ ಶಿಕ್ಷಕಿ ಬೆನ್ನಿಗೆ ಬಾಸುಂಡೆ ಬರುವಂತೆ ಹೊಡೆದಿದ್ದಾರೆ ಎನ್ನಲಾಗಿದೆ. ಕಳೆದ ಒಂದು ತಿಂಗಳ ಹಿಂದೆ ಕೂಡ ಇದೇ ರೀತಿಯ ಘಟನೆ ನಡೆದಿದ್ದಾಗಿ ಪೋಷಕರು ಆರೋಪಿಸಿದ್ದಾರೆ. ಈ ವಿಚಾರವಾಗಿ ಪೋಷಕರು ಶಾಲೆಗೆ ತೆರಳಿ ಪ್ರಶ್ನಿಸಿದ ಬಳಿಕ ಹನುಮಂತನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆಗ ಶಿಕ್ಷಕಿ ಪೊಲೀಸರ ಮುಂದೆ ಕ್ಷಮೆಯಾಚನೆ ಮಾಡಿದ್ದರು ಎಂದು ತಿಳಿದುಬಂದಿದೆ. ಆದರೂ, ನಿನ್ನೆ ಮತ್ತೆ ಬಾಲಕನಿಗೆ ಹಲ್ಲೆ ನಡೆಸಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಪೋಷಕರು ಶಾಲಾ ಆಡಳಿತ ಮಂಡಳಿಯನ್ನು ಸಂಪರ್ಕಿಸಿದಾಗ, ಅವರಿಗೆ ತಕ್ಕ ಮರ್ಯಾದೆ ನೀಡದೇ ಮಾತನಾಡಲಾಗಿದೆ ಎಂಬ ದೂರೂ ಕೇಳಿಬಂದಿದೆ. ಟಿಸಿ (Transfer Certificate) ನೀಡಿ ಶಾಲೆಯಿಂದ ಕಳುಹಿಸುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಇನ್ನೊಂದೆಡೆ, ಶಾಲಾ ಆಡಳಿತ ಮಂಡಳಿ “ಮಕ್ಕಳಿಗೆ ಹೊಡೆದು ಪಾಠ ಮಾಡುವುದಿಲ್ಲ; ಇಷ್ಟವಿಲ್ಲದಿದ್ದರೆ ಮಕ್ಕಳನ್ನು ಕರೆದುಕೊಂಡು ಹೋಗಬಹುದು” ಎಂದು ಪ್ರತಿಕ್ರಿಯಿಸಿರುವುದಾಗಿ ತಿಳಿದುಬಂದಿದೆ.

2026ರ ಬಜೆಟ್‌ನಲ್ಲಿ ಶೋಷಿತ ಸಮುದಾಯಗಳಿಗೆ ಒತ್ತು: ಪೂರ್ವಭಾವಿ ಸಭೆಯಲ್ಲಿ ಸರ್ಕಾರದ ಗಮನ ಸೆಳೆತ

Image
ಬೆಂಗಳೂರು : ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ 2026ನೇ ಸಾಲಿನ ಬಜೆಟ್‌ನಲ್ಲಿ ಶೋಷಿತ ಸಮುದಾಯಗಳಿಗೆ ಹೆಚ್ಚಿನ ಒತ್ತು ನೀಡುವಂತೆ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ನಗರದ ಮೌರ್ಯ ಹೋಟೆಲ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಶೋಷಿತ ಸಮುದಾಯಗಳ ಪ್ರತಿನಿಧಿಗಳು ಭಾಗವಹಿಸಿ ತಮ್ಮ ಸಮುದಾಯಗಳ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳು, ಸೌಲಭ್ಯಗಳು ಮತ್ತು ಮೀಸಲಾತಿ ಸಂಬಂಧಿತ ವಿಚಾರಗಳನ್ನು ಚರ್ಚಿಸಿದರು. ಬಜೆಟ್‌ನಲ್ಲಿ ಶೋಷಿತ ವರ್ಗಗಳಿಗೆ ನ್ಯಾಯಸಮ್ಮತ ಹಂಚಿಕೆ ಕಲ್ಪಿಸುವಂತೆ ಸರ್ಕಾರಕ್ಕೆ ಒತ್ತಾಯಿಸುವ ನಿರ್ಣಯವನ್ನೂ ಕೈಗೊಳ್ಳಲಾಯಿತು. ಈ ವೇಳೆ ಸೂರ್ಯವಂಶ ಕ್ಷತ್ರಿಯ ಸಮಾಜದ ಮುಖಂಡರಾದ ರಾಘವ್ ಸೂಲೆಗೈ ಅವರು ತಮ್ಮ ಸಮಾಜ ಎದುರಿಸುತ್ತಿರುವ ಕುಂದುಕೊರತೆಗಳನ್ನು ಸಭೆಯ ಗಮನಕ್ಕೆ ತಂದರು. ಸಮಾಜದ ಅಭಿವೃದ್ಧಿಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಸಲ್ಲಿಸಿ, ಸರ್ಕಾರ ಸ್ಪಂದಿಸಬೇಕೆಂದು ಆಗ್ರಹಿಸಿದರು.

ಶರ್ಮಾಸ್ ಪರ್ವ ಸಂಭ್ರಮ: ಮಾಧುರಿ ಡಾನ್ಸ್ ಅಕಾಡೆಮಿಯ 23ನೇ ವಾರ್ಷಿಕೋತ್ಸವ ಅದ್ಧೂರಿ ಆಚರಣೆ

Image
ಶರ್ಮಾಸ್ ಪರ್ವ ಸಂಭ್ರಮ: ಮಾಧುರಿ ಡಾನ್ಸ್ ಅಕಾಡೆಮಿಯ 23ನೇ ವಾರ್ಷಿಕೋತ್ಸವ ಅದ್ಧೂರಿ ಆಚರಣೆ ಬೆಂಗಳೂರು : ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಶರ್ಮಾಸ್ ಮಾಧುರಿ ಡಾನ್ಸ್ ಅಕಾಡೆಮಿಯ 23ನೇ ವಾರ್ಷಿಕೋತ್ಸವದ ಅಂಗವಾಗಿ “ಶರ್ಮಾಸ್ ಪರ್ವ” ಎಂಬ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಪ್ರಸನ್ನ ಶರ್ಮ, ನಿರ್ದೇಶಕರಾದ ಗಜೇಂದ್ರ ಶರ್ಮ, ಕಾರ್ಯದರ್ಶಿ ಮಾಧುರಿ ಶರ್ಮ ಹಾಗೂ ವ್ಯವಸ್ಥಾಪಕರಾದ ಸಂಜಯ್ ಉಪಸ್ಥಿತರಿದ್ದು ವಿದ್ಯಾರ್ಥಿಗಳ ಪ್ರದರ್ಶನಗಳನ್ನು ಮೆಚ್ಚುಗೆ ವ್ಯಕ್ತಪಡಿಸಿದರು. ಅಕಾಡೆಮಿಯ ಆರು ಶಾಖೆಗಳ ವಿದ್ಯಾರ್ಥಿಗಳು ನೃತ್ಯ ರೂಪಕಗಳು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿ ಪ್ರೇಕ್ಷಕರಿಂದ ಭಾರೀ ಚಪ್ಪಾಳೆ ಪಡೆದರು. ಕಾರ್ಯಕ್ರಮದಲ್ಲಿ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಕ್ಕಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಮತಿ ಪ್ರಸನ್ನ ಶರ್ಮ, ಅಕಾಡೆಮಿ ಕಳೆದ 23 ವರ್ಷಗಳಿಂದ ನೃತ್ಯಕಲೆಯ ಮೂಲಕ ಮಕ್ಕಳಲ್ಲಿ ಆತ್ಮವಿಶ್ವಾಸ, ಶಿಸ್ತು ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುತ್ತಿದೆ ಎಂದರು. ಯುವ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ ಅವರು, ಕಲೆ ವ್ಯಕ್ತಿತ್ವವನ್ನು ರೂಪಿಸುವ ಶಕ್ತಿಯಾಗಿದೆ; ನಿರಂತರ ಅಭ್ಯಾಸ ಮತ್ತು ಆತ್ಮವಿಶ್ವಾಸದಿಂದ ಗುರ...