2026ರ ಬಜೆಟ್‌ನಲ್ಲಿ ಶೋಷಿತ ಸಮುದಾಯಗಳಿಗೆ ಒತ್ತು: ಪೂರ್ವಭಾವಿ ಸಭೆಯಲ್ಲಿ ಸರ್ಕಾರದ ಗಮನ ಸೆಳೆತ

ಬೆಂಗಳೂರು : ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ 2026ನೇ ಸಾಲಿನ ಬಜೆಟ್‌ನಲ್ಲಿ ಶೋಷಿತ ಸಮುದಾಯಗಳಿಗೆ ಹೆಚ್ಚಿನ ಒತ್ತು ನೀಡುವಂತೆ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ನಗರದ ಮೌರ್ಯ ಹೋಟೆಲ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ವಿವಿಧ ಶೋಷಿತ ಸಮುದಾಯಗಳ ಪ್ರತಿನಿಧಿಗಳು ಭಾಗವಹಿಸಿ ತಮ್ಮ ಸಮುದಾಯಗಳ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳು, ಸೌಲಭ್ಯಗಳು ಮತ್ತು ಮೀಸಲಾತಿ ಸಂಬಂಧಿತ ವಿಚಾರಗಳನ್ನು ಚರ್ಚಿಸಿದರು. ಬಜೆಟ್‌ನಲ್ಲಿ ಶೋಷಿತ ವರ್ಗಗಳಿಗೆ ನ್ಯಾಯಸಮ್ಮತ ಹಂಚಿಕೆ ಕಲ್ಪಿಸುವಂತೆ ಸರ್ಕಾರಕ್ಕೆ ಒತ್ತಾಯಿಸುವ ನಿರ್ಣಯವನ್ನೂ ಕೈಗೊಳ್ಳಲಾಯಿತು.

ಈ ವೇಳೆ ಸೂರ್ಯವಂಶ ಕ್ಷತ್ರಿಯ ಸಮಾಜದ ಮುಖಂಡರಾದ ರಾಘವ್ ಸೂಲೆಗೈ ಅವರು ತಮ್ಮ ಸಮಾಜ ಎದುರಿಸುತ್ತಿರುವ ಕುಂದುಕೊರತೆಗಳನ್ನು ಸಭೆಯ ಗಮನಕ್ಕೆ ತಂದರು. ಸಮಾಜದ ಅಭಿವೃದ್ಧಿಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಸಲ್ಲಿಸಿ, ಸರ್ಕಾರ ಸ್ಪಂದಿಸಬೇಕೆಂದು ಆಗ್ರಹಿಸಿದರು.

Comments

Popular posts from this blog

Lions District 317A Golden Jubilee a grand success – a confluence of service activities

ಸಾಮೂಹಿಕ ಶ್ರೀನಿವಾಸ ಕಲ್ಯಾಣದ ಪೂರ್ವಭಾವಿ ಸಭೆ