Posts

kuwj ಬೆಂಗಳೂರು ನಗರ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾಗಿ ನಟರಾಜ್ ಬಿಪಿ ಆಯ್ಕೆ

Image
ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬೆಂಗಳೂರು ನಗರ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪತ್ರಕರ್ತರಾದ ನಟರಾಜ್ ಬಿ.ಪಿ. ಅವರು ಸ್ಪಷ್ಟ ಬಹುಮತದೊಂದಿಗೆ ಆಯ್ಕೆಯಾಗಿದ್ದಾರೆ. ನಗರದ ವಿವಿಧ ಪತ್ರಿಕಾ ಹಾಗೂ ಇಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸದಸ್ಯರು ತಮ್ಮ ಅಮೂಲ್ಯ ಮತಗಳ ಮೂಲಕ ನಟರಾಜ್ ಬಿ.ಪಿ. ಅವರಿಗೆ ಬೆಂಬಲ ಸೂಚಿಸಿದ್ದು, ಸಂಘಟನೆಯಲ್ಲಿ ಅವರ ಸಕ್ರಿಯತೆ ಮತ್ತು ನಿಷ್ಠೆಗೆ ಮನ್ನಣೆ ನೀಡಿದಂತಾಗಿದೆ. ಚುನಾವಣೆ ಶಾಂತಿಪೂರ್ಣ ಹಾಗೂ ಉತ್ಸಾಹಭರಿತ ವಾತಾವರಣದಲ್ಲಿ ನಡೆದಿದ್ದು, ಫಲಿತಾಂಶ ಪ್ರಕಟವಾದ ಕ್ಷಣದಿಂದಲೇ ಪತ್ರಕರ್ತ ವಲಯದಲ್ಲಿ ಹರ್ಷೋದ್ಗಾರ ವ್ಯಕ್ತವಾಯಿತು. ಸಂಘಟನೆಯ ಹಿತಾಸಕ್ತಿಗಾಗಿ ಹಲವು ವರ್ಷಗಳಿಂದ ತೊಡಗಿಸಿಕೊಂಡಿರುವ ನಟರಾಜ್ ಬಿ.ಪಿ. ಅವರು ಪತ್ರಕರ್ತರ ವೃತ್ತಿಪರ ಭದ್ರತೆ, ಸಾಮಾಜಿಕ ಗೌರವ, ಕಲ್ಯಾಣ ಯೋಜನೆಗಳ ಪರಿಣಾಮಕಾರಿ ಜಾರಿಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ. ಸಂಘಟನೆಯನ್ನು ಇನ್ನಷ್ಟು ಸಂಘಟಿತಗೊಳಿಸಿ, ಸದಸ್ಯರ ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಗೆಲುವಿನ ಬಳಿಕ ಮಾತನಾಡಿದ ಅವರು, “ನನ್ನ ಮೇಲೆ ವಿಶ್ವಾಸ ಇಟ್ಟು ಮತ ನೀಡಿದ ಪ್ರತಿಯೊಬ್ಬ ಪತ್ರಕರ್ತ ಸ್ನೇಹಿತರಿಗೆ ನಾನು ಸದಾ ಋಣಿ. ಈ ವಿಶ್ವಾಸಕ್ಕೆ ತಕ್ಕ ರೀತಿಯಲ್ಲಿ ಕಾರ್ಯನಿರ್ವಹಿಸಿ, ಸಂಘಟನೆಯ ಬಲವರ್ಧನೆಗಾಗಿ ಶ್ರಮಿಸುತ್ತೇನೆ”...

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಿಂದ ಬಾಲಕನ ಮೇಲೆ ಹಲ್ಲೆ ಆರೋಪ

Image
ಬೆಂಗಳೂರು: ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀನಿವಾಸನಗರದಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ಐದು ವರ್ಷದ ಬಾಲಕನ ಮೇಲೆ ಶಿಕ್ಷಕಿಯೊಬ್ಬರು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಪೋಷಕರ ಹೇಳಿಕೆಯ ಪ್ರಕಾರ, ಶ್ರೀ ಕನಕ ಇಂಗ್ಲಿಷ್ ಸ್ಕೂಲ್‌ನಲ್ಲಿ ಓದುತ್ತಿರುವ ಬಾಲಕನಿಗೆ ಶಿಕ್ಷಕಿ ಬೆನ್ನಿಗೆ ಬಾಸುಂಡೆ ಬರುವಂತೆ ಹೊಡೆದಿದ್ದಾರೆ ಎನ್ನಲಾಗಿದೆ. ಕಳೆದ ಒಂದು ತಿಂಗಳ ಹಿಂದೆ ಕೂಡ ಇದೇ ರೀತಿಯ ಘಟನೆ ನಡೆದಿದ್ದಾಗಿ ಪೋಷಕರು ಆರೋಪಿಸಿದ್ದಾರೆ. ಈ ವಿಚಾರವಾಗಿ ಪೋಷಕರು ಶಾಲೆಗೆ ತೆರಳಿ ಪ್ರಶ್ನಿಸಿದ ಬಳಿಕ ಹನುಮಂತನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆಗ ಶಿಕ್ಷಕಿ ಪೊಲೀಸರ ಮುಂದೆ ಕ್ಷಮೆಯಾಚನೆ ಮಾಡಿದ್ದರು ಎಂದು ತಿಳಿದುಬಂದಿದೆ. ಆದರೂ, ನಿನ್ನೆ ಮತ್ತೆ ಬಾಲಕನಿಗೆ ಹಲ್ಲೆ ನಡೆಸಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಪೋಷಕರು ಶಾಲಾ ಆಡಳಿತ ಮಂಡಳಿಯನ್ನು ಸಂಪರ್ಕಿಸಿದಾಗ, ಅವರಿಗೆ ತಕ್ಕ ಮರ್ಯಾದೆ ನೀಡದೇ ಮಾತನಾಡಲಾಗಿದೆ ಎಂಬ ದೂರೂ ಕೇಳಿಬಂದಿದೆ. ಟಿಸಿ (Transfer Certificate) ನೀಡಿ ಶಾಲೆಯಿಂದ ಕಳುಹಿಸುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಇನ್ನೊಂದೆಡೆ, ಶಾಲಾ ಆಡಳಿತ ಮಂಡಳಿ “ಮಕ್ಕಳಿಗೆ ಹೊಡೆದು ಪಾಠ ಮಾಡುವುದಿಲ್ಲ; ಇಷ್ಟವಿಲ್ಲದಿದ್ದರೆ ಮಕ್ಕಳನ್ನು ಕರೆದುಕೊಂಡು ಹೋಗಬಹುದು” ಎಂದು ಪ್ರತಿಕ್ರಿಯಿಸಿರುವುದಾಗಿ ತಿಳಿದುಬಂದಿದೆ.

2026ರ ಬಜೆಟ್‌ನಲ್ಲಿ ಶೋಷಿತ ಸಮುದಾಯಗಳಿಗೆ ಒತ್ತು: ಪೂರ್ವಭಾವಿ ಸಭೆಯಲ್ಲಿ ಸರ್ಕಾರದ ಗಮನ ಸೆಳೆತ

Image
ಬೆಂಗಳೂರು : ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ 2026ನೇ ಸಾಲಿನ ಬಜೆಟ್‌ನಲ್ಲಿ ಶೋಷಿತ ಸಮುದಾಯಗಳಿಗೆ ಹೆಚ್ಚಿನ ಒತ್ತು ನೀಡುವಂತೆ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ನಗರದ ಮೌರ್ಯ ಹೋಟೆಲ್ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಶೋಷಿತ ಸಮುದಾಯಗಳ ಪ್ರತಿನಿಧಿಗಳು ಭಾಗವಹಿಸಿ ತಮ್ಮ ಸಮುದಾಯಗಳ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳು, ಸೌಲಭ್ಯಗಳು ಮತ್ತು ಮೀಸಲಾತಿ ಸಂಬಂಧಿತ ವಿಚಾರಗಳನ್ನು ಚರ್ಚಿಸಿದರು. ಬಜೆಟ್‌ನಲ್ಲಿ ಶೋಷಿತ ವರ್ಗಗಳಿಗೆ ನ್ಯಾಯಸಮ್ಮತ ಹಂಚಿಕೆ ಕಲ್ಪಿಸುವಂತೆ ಸರ್ಕಾರಕ್ಕೆ ಒತ್ತಾಯಿಸುವ ನಿರ್ಣಯವನ್ನೂ ಕೈಗೊಳ್ಳಲಾಯಿತು. ಈ ವೇಳೆ ಸೂರ್ಯವಂಶ ಕ್ಷತ್ರಿಯ ಸಮಾಜದ ಮುಖಂಡರಾದ ರಾಘವ್ ಸೂಲೆಗೈ ಅವರು ತಮ್ಮ ಸಮಾಜ ಎದುರಿಸುತ್ತಿರುವ ಕುಂದುಕೊರತೆಗಳನ್ನು ಸಭೆಯ ಗಮನಕ್ಕೆ ತಂದರು. ಸಮಾಜದ ಅಭಿವೃದ್ಧಿಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಸಲ್ಲಿಸಿ, ಸರ್ಕಾರ ಸ್ಪಂದಿಸಬೇಕೆಂದು ಆಗ್ರಹಿಸಿದರು.

ಶರ್ಮಾಸ್ ಪರ್ವ ಸಂಭ್ರಮ: ಮಾಧುರಿ ಡಾನ್ಸ್ ಅಕಾಡೆಮಿಯ 23ನೇ ವಾರ್ಷಿಕೋತ್ಸವ ಅದ್ಧೂರಿ ಆಚರಣೆ

Image
ಶರ್ಮಾಸ್ ಪರ್ವ ಸಂಭ್ರಮ: ಮಾಧುರಿ ಡಾನ್ಸ್ ಅಕಾಡೆಮಿಯ 23ನೇ ವಾರ್ಷಿಕೋತ್ಸವ ಅದ್ಧೂರಿ ಆಚರಣೆ ಬೆಂಗಳೂರು : ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಶರ್ಮಾಸ್ ಮಾಧುರಿ ಡಾನ್ಸ್ ಅಕಾಡೆಮಿಯ 23ನೇ ವಾರ್ಷಿಕೋತ್ಸವದ ಅಂಗವಾಗಿ “ಶರ್ಮಾಸ್ ಪರ್ವ” ಎಂಬ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಪ್ರಸನ್ನ ಶರ್ಮ, ನಿರ್ದೇಶಕರಾದ ಗಜೇಂದ್ರ ಶರ್ಮ, ಕಾರ್ಯದರ್ಶಿ ಮಾಧುರಿ ಶರ್ಮ ಹಾಗೂ ವ್ಯವಸ್ಥಾಪಕರಾದ ಸಂಜಯ್ ಉಪಸ್ಥಿತರಿದ್ದು ವಿದ್ಯಾರ್ಥಿಗಳ ಪ್ರದರ್ಶನಗಳನ್ನು ಮೆಚ್ಚುಗೆ ವ್ಯಕ್ತಪಡಿಸಿದರು. ಅಕಾಡೆಮಿಯ ಆರು ಶಾಖೆಗಳ ವಿದ್ಯಾರ್ಥಿಗಳು ನೃತ್ಯ ರೂಪಕಗಳು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿ ಪ್ರೇಕ್ಷಕರಿಂದ ಭಾರೀ ಚಪ್ಪಾಳೆ ಪಡೆದರು. ಕಾರ್ಯಕ್ರಮದಲ್ಲಿ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಕ್ಕಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಮತಿ ಪ್ರಸನ್ನ ಶರ್ಮ, ಅಕಾಡೆಮಿ ಕಳೆದ 23 ವರ್ಷಗಳಿಂದ ನೃತ್ಯಕಲೆಯ ಮೂಲಕ ಮಕ್ಕಳಲ್ಲಿ ಆತ್ಮವಿಶ್ವಾಸ, ಶಿಸ್ತು ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುತ್ತಿದೆ ಎಂದರು. ಯುವ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ ಅವರು, ಕಲೆ ವ್ಯಕ್ತಿತ್ವವನ್ನು ರೂಪಿಸುವ ಶಕ್ತಿಯಾಗಿದೆ; ನಿರಂತರ ಅಭ್ಯಾಸ ಮತ್ತು ಆತ್ಮವಿಶ್ವಾಸದಿಂದ ಗುರ...

ಅರುವೇಲು ನಿಯೋಗಿ ಬ್ರಾಹ್ಮಣ ಸಂಘದ 16ನೇ ವರ್ಷದ ಸರ್ವ ಸದಸ್ಯರ ಮಹಾಸಭೆ

Image
ಬೆಂಗಳೂರು: ನಗರದ ಬುಲ್ ಟೆಂಪಲ್ ರಸ್ತೆಯಲ್ಲಿರುವ ಗಾಂಜಾಂ ಮಂಟಪದಲ್ಲಿ ಅರುವೇಲು ನಿಯೋಗಿ ಬ್ರಾಹ್ಮಣ ಸಂಘದ 16ನೇ ವರ್ಷದ ಸರ್ವ ಸದಸ್ಯರ ಮಹಾಸಭೆಯನ್ನು ಆಯೋಜಿಸಲಾಗಿತ್ತು.  ಇದೇ ಸಂದರ್ಭದಲ್ಲಿ ಸಂಘದ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಲಾಯಿತು. ಸಭೆಯನ್ನು ಉದ್ದೇಶಿಸಿ ಸಂಘದ ಅಧ್ಯಕ್ಷರಾದ ವೈ.ಆರ್. ಜನಾರ್ಧನ್ ರಾವ್ ಅವರು ಮಾತನಾಡಿ, ಸಂಘವು 16 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಈ ಅವಧಿಯಲ್ಲಿ ಹಲವು ಜನೋಪಯೋಗಿ ಹಾಗೂ ಸಮಾಜಮುಖಿ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದೆ. ಈ ವರ್ಷದ ಪ್ರಮುಖ ಯೋಜನೆಯಾಗಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಮಹತ್ವ ನೀಡಲಾಗುತ್ತಿದ್ದು, ಸರ್ವ ಸದಸ್ಯರು ಈ ಯೋಜನೆಗೆ ಸಹಕಾರ ನೀಡಬೇಕೆಂದು ವಿನಂತಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್ ನರಸರಾಮರಾವ್ ಅವರು ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯ ತಿಳುವಳಿಕೆ ಪತ್ರವನ್ನು ಮಂಡಿಸಿ, ಸಭೆಯ ನಡವಳಿಕೆಗಳನ್ನು ಓದಿ ದಾಖಲಿಸಿದರು. ಜೊತೆಗೆ ಸಂಘದ 2024–25ನೇ ಸಾಲಿನ ವಾರ್ಷಿಕ ವರದಿ, ಹೊಸ ನಿರ್ಣಯಗಳು ಹಾಗೂ ಯೋಜನೆಗಳು ಮತ್ತು 2025–26ನೇ ಸಾಲಿನ ಅಂದಾಜು ಆಯವ್ಯಯವನ್ನು ಸರ್ವ ಸದಸ್ಯರ ಮುಂದೆ ಮಂಡಿಸಿದರು. ಸಭೆಯಲ್ಲಿ ನಿರ್ಣಯಗಳು ಹಾಗೂ ಲೆಕ್ಕ ತಪಾಸಣಾ ವರದಿಯನ್ನು ಪರಿಶೀಲಿಸಿದ ಬಳಿಕ ಸರ್ವ ಸದಸ್ಯರು ಅವುಗಳನ್ನು ಏಕಮತದಿಂದ ಅಂಗೀಕರಿಸಿದರು. ಇದೇ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಸಂಘದ ಸದಸ್ಯರಿಗೆ...

ಬೆಂಗಳೂರು: ನಾರಾಯಣ e-ಟೆಕ್ನೋ & ಒಲಿಂಪಿಯಾಡ್ ಶಾಲೆಯ 13ನೇ ವಾರ್ಷಿಕೋತ್ಸವ ‘ಉತ್ಸವಂ’ ಭವ್ಯವಾಗಿ ಜರುಗಿ

Image
ಬೆಂಗಳೂರು : ವಿದ್ಯಾರಣ್ಯಪುರದ ನಾರಾಯಣ e-ಟೆಕ್ನೋ ಮತ್ತು ಒಲಿಂಪಿಯಾಡ್ ಶಾಲೆಯ 13ನೇ ವಾರ್ಷಿಕೋತ್ಸವದ ಅಂಗವಾಗಿ ‘ಉತ್ಸವಂ’ ಶೀರ್ಷಿಕೆಯಲ್ಲಿ ಆಯೋಜಿಸಲ್ಪಟ್ಟ ವಾರ್ಷಿಕ ದಿನಾಚರಣೆ ನಗರದ ಅಂಬೇಡ್ಕರ್ ಭವನದಲ್ಲಿ ಭವ್ಯವಾಗಿ ನೆರವೇರಿತು. ನರ್ಸರಿ ಇಂದಾಗಿ ಹೈಸ್ಕೂಲ್‌ವರೆಗೆ ವಿವಿಧ ತರಗತಿಯ ವಿದ್ಯಾರ್ಥಿಗಳ ಬಹುಮುಖ ಪ್ರತಿಭೆ, ಸಾಂಸ್ಕೃತಿಕ ಕೌಶಲ್ಯ ಹಾಗೂ ಕ್ರೀಡಾ ವೈಭವಕ್ಕೆ ಈ ವೇದಿಕೆ ಸಾಕ್ಷಿಯಾಯಿತು. ವಿದ್ಯಾರ್ಥಿಗಳ ಪ್ರದರ್ಶನಗಳನ್ನು ಕಣ್ತುಂಬಿಕೊಂಡು ಪಾಲಕರು ಮತ್ತು ವಿಶೇಷ ಆಹ್ವಾನಿತರು ದೊಡ್ಡ ಸಂಖ್ಯೆಯಲ್ಲಿ ಹಾಜರಿದ್ದು, ಕಾರ್ಯಕ್ರಮಕ್ಕೆ ಮಂದಹಾಸದ ಚೈತನ್ಯ ತುಂಬಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಇಸ್ರೋ ವಿಜ್ಞಾನಿಗಳಾದ ಸುರೇಶ್ ಆರ್ ನಾಯಕ್ ರವರು ಮಕ್ಕಳ ವೈಜ್ಞಾನಿಕ ಕುತೂಹಲ, ಸಂಶೋಧನಾ ಮನೋಭಾವ ಹಾಗೂ ಭವಿಷ್ಯದ ತಾಂತ್ರಿಕ ಯುಗದಲ್ಲಿ ವಿದ್ಯಾರ್ಥಿಗಳ ಕೊಡುಗೆ ಕುರಿತಾಗಿ ಪ್ರೇರಣಾದಾಯಕವಾಗಿ ಮಾತನಾಡಿದರು. “ಶಿಕ್ಷಣದ ಜೊತೆಗೆ ವಿಜ್ಞಾನ ಮನೋಭಾವ ಬೆಳೆಸಿದಾಗ ಮಾತ್ರ ಮುಂದಿನ ಪೀಳಿಗೆ ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಲಿದೆ,” ಎಂದು ಅವರು ಮಕ್ಕಳನ್ನು ಉದ್ದೇಶಿಸಿ ಹೇಳಿದರು. ಯಲಹಂಕ ಉಪವಿಭಾಗದ ಸಹ ಪೊಲೀಸ್ ಆಯುಕ್ತ ನರಸಿಂಹಮೂರ್ತಿ ಪಿ ರವರು ವಿದ್ಯಾರ್ಥಿಗಳಲ್ಲಿ ಶಿಸ್ತು, ನೈತಿಕ ಮೌಲ್ಯಗಳು, ಸಾಮಾಜಿಕ ಜವಾಬ್ದಾರಿ ಹಾಗೂ ರಾಷ್ಟ್ರಪ್ರೇಮದ ಅಗತ್ಯತೆಯನ್ನು ಸವಿಸ್ತಾರವಾಗಿ ವಿವರ...

ನವೆಂಬರ್ 22ರಂದು ಜಮ್ಮು, ಕಾಶ್ಮೀರದ ಪೆಹಲ್ಗಾಮ್ ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ

Image
ಬೆಂಗಳೂರು : ಜಿಬಿಎ ನೌಕರರ ಭವನದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ-ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಮ್ಮು, ಕಾಶ್ಮೀರದ ಪೆಹಲ್ಲಾಮ್ ನಲ್ಲಿ ನವೆಂಬರ್ 22ರಂದು ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಮತ್ತು ಪಹಲ್ಗಾಮ್ ಹತ್ಯೆಯಾದ ಭಾರತಾಂಬೆ ಮಕ್ಕಳಿಗೆ ನುಡಿ ನಮನ ಕಾರ್ಯಕ್ರಮ ಹಾಗೂ ಕರುನಾಡು ಸಾಧಕರು ಪ್ರಶಸ್ತಿ ಪ್ರಧಾನ ಸಮಾರಂಭದ ಕುರಿತು ಮಾಧ್ಯಮಗೋಷ್ಟಿ ಮತ್ತು ಪೋಸ್ಟರ್ ಬಿಡುಗಡೆ ಸಮಾರಂಭದ ಕುರಿತು ಅಧ್ಯಕ್ಷರಾದ ಎ.ಅಮೃತ್ ರಾಜ್ ರವರು ಮಾಧ್ಯಮಗೋಷ್ಟಿ ಏರ್ಪಡಿಸಿದ್ದರು. ಇದೇ ಸಂದರ್ಭದಲ್ಲಿ ಅಧ್ಯಕ್ಷರಾದ ಎ.ಅಮೃತ್ ರಾಜ್ ರವರು ಮಾತನಾಡಿ ಕನ್ನಡ ಭಾಷೆಗೆ 2500ಸಾವಿರ ವರ್ಷಗಳ ಇತಿಹಾಸವಿದೆ. ನಮ್ಮ ಭಾಷೆ ಲಿಪಿಗಳ ರಾಣಿ ಎಂಬ ಬಿರುದಾಂಕಿತವಾಗಿದೆ. ಕನ್ನಡ ಭಾಷೆ ಉಳಿಸಿ, ಬೆಳಸಬೇಕು ವಿಶ್ವಭಾಷೆಯಾಗಿ ಮಾಡಬೇಕು ಉದ್ದೇಶದಿಂದ ಪ್ರಥಮ ಬಾರಿಗೆ 2022ರಲ್ಲಿ ಕಾಶಿಯಲ್ಲಿ ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ನಂತರ 2023ರಲ್ಲಿ ನೇಪಾಳ ಪಶುಪತಿ ದೇವಾಲಯ ಸನ್ನಿಧಾನದಲ್ಲಿ ಅಂತರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಮತ್ತು 2024ರಲ್ಲಿ ಹರಿದ್ವಾರದಲ್ಲಿ ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಇದೀಗ 2025ರ ನವೆಂಬರ್ 22ಸಂಜೆ 4ಗಂಟೆಗೆ ಜಮ್ಮು, ಕಾಶ್ಮೀರದ ಪೆಹಲ್ಲಾಮ್ ನಲ್ಲಿ ರಾಷ್ಟ್ರೀಯ ಕರ್ನಾಟಕ ರಾಜ್ಯೋತ್ಸವ ಮತ್ತು ಪಹಲ್ಗಾಮ್ ನಲ್ಲಿ ಉಗ್ರರ ದಾಳಿಗ...

PMBJK ಹೊಸ ದೂರ ನೀತಿಗೆ ಮಾಲೀಕರ ತೀವ್ರ ಆಕ್ಷೇಪ – ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

Image
  PMBJK ಹೊಸ ದೂರ ನೀತಿಗೆ ಮಾಲೀಕರ ತೀವ್ರ ಆಕ್ಷೇಪ – ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ಬೆಂಗಳೂರು : ಪ್ರಧಾನ ಮಂತ್ರಿ ಭಾರತೀಯ ಜನಔಷಧಿ ಕೇಂದ್ರಗಳ (PMBJK) ಮಾಲೀಕರ ಸಂಘವು ಹೊಸ ದೂರ ನೀತಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇತ್ತೀಚೆಗೆ ಕೇಂದ್ರ ಸರ್ಕಾರ ಪ್ರಕಟಿಸಿರುವ ಈ ನೀತಿ ಅಸ್ತಿತ್ವ opದಲ್ಲಿರುವ ಕೇಂದ್ರಗಳ ಹಿತಾಸಕ್ತಿಗೆ ಧಕ್ಕೆಯಾಗಿದೆ ಎಂದು ಸಂಘದ ಪ್ರತಿನಿಧಿಗಳು ಆರೋಪಿಸಿದ್ದಾರೆ. ನಗರದಲ್ಲಿಂದು ನಡೆದ ಪ್ರತಿಭಟನೆಯಲ್ಲಿ ಸಂಘದ ಸದಸ್ಯರು ಕಪ್ಪುಪಟ್ಟಿ ಧರಿಸಿ ತಮ್ಮ ಅಸಮಾಧಾನವನ್ನು ಹೊರಹಾಕಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಅಶೋಕ್ ಬಿ.ಕೆ ರವರು ಮಾತನಾಡಿ “ಹೊಸ ದೂರ ನೀತಿ ಜಾರಿಗೆ ಬಂದರೆ ಈಗಾಗಲೇ ಭಾರೀ ಹೂಡಿಕೆ ಮಾಡಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಸರ್ಕಾರ ತಕ್ಷಣವೇ ನೀತಿಯನ್ನು ಮರುಪರಿಶೀಲಿಸಬೇಕು” ಎಂದು ಆಗ್ರಹಿಸಿದರು.  ಉಪಾಧ್ಯಕ್ಷ ಚಂದ್ರಶೇಖರ್ ವೈ. ಮಾತನಾಡಿ, “ಬೆಂಗಳೂರು ಸೇರಿದಂತೆ ಮಹಾನಗರಗಳಲ್ಲಿ ಅನೇಕ ಕೇಂದ್ರ ಮಾಲೀಕರು ಪ್ರಮುಖ ಸ್ಥಳಗಳಲ್ಲಿ ಕೇಂದ್ರ ಸ್ಥಾಪನೆ ಮತ್ತು ನಿರ್ವಹಣೆಗೆ ಭಾರೀ ಸಾಲ ಪಡೆದು ಹೂಡಿಕೆ ಮಾಡಿದ್ದಾರೆ. ಜನಔಷಧಿ ಉತ್ಪನ್ನಗಳ ಸಂಪೂರ್ಣ ಶ್ರೇಣಿಯನ್ನು ನಿರಂತರವಾಗಿ ಲಭ್ಯವಿರಿಸಲು ಹೆಚ್ಚಿನ ದಾಸ್ತಾನುಗಳನ್ನು ಹೊಂದಬೇಕಾಗುತ್ತದೆ. ಇಂತಹ ನಿರ್ವಹಣೆಗೆ ಸಿಬ್ಬಂದಿ ಸಂಬಳ ಹಾಗೂ ಪ್ರತಿ ತಿಂಗಳಿಗೆ ₹40,000 ರಿಂದ ₹80,00...

ಕರ್ನಾಟಕ ರಾಜ್ಯ ಬಣಜಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘದ 18 ನೇ ವಾರ್ಷಿಕೋತ್ಸವ

Image
  ಕರ್ನಾಟಕ ರಾಜ್ಯ ಬಣಜಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘದ 18 ನೇ ವಾರ್ಷಿಕೋತ್ಸವ ಗೋಕಾಕ್ : ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ತಾಲೂಕಾ ಘಟಕದ ವತಿಯಿಂದ ಗೋಕಾಕಿನ ಜೆ.ಎಸ್.ಎಸ್ ಕಾಲೇಜ ಸಭಾ ಭವನದಲ್ಲಿ ಇಂದು ಹಮ್ಮಿಕೊಂಡಿದ್ದ ಬಣಜಿಗ ಸಮಾಜದ 18 ನೇ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಮತ್ತು ರಾಜ್ಯಾಧ್ಯಕ್ಷರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಶ್ರೀ ಜಗದೀಶ್ ಶೆಟ್ಟರ್ ಅವರು ಪಾಲ್ಗೊಂಡು, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಗೋಕಾಕ ತಾಲೂಕಾ ಘಟಕದ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಶ್ರೀ ಚನ್ನಪ್ಪ ಬಸಪ್ಪ ಕೌಜಲಗಿ, ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ರೂಡಗಿ, ಪ್ರಮುಖರಾದ ಶ್ರೀ ಮಲ್ಲಿಕಾರ್ಜುನ ಸಾವಕಾರ, ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ವಿಶ್ವಸ್ಥ ಮಂಡಳಿ ಸದಸ್ಯರಾದ ಶ್ರೀ ಬಸನಗೌಡ ಶಿ. ಪಾಟೀಲ, ಗೋಕಾಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ವಿಶ್ವನಾಥ ಅಡಿವೆಪ್ಪ ಕಡಕೋಳ, ಗೋಕಾಕ ಶಿಕ್ಷಣ ಸಂಸ್ಥೆಯ ನಿರ್ದೇಶಕರು ಹಾಗೂ ವೈದ್ಯರಾದ ಡಾ. ವೀರಣ್ಣ ಬಿ. ಉಪ್ಪಿನ, ಗೋಕಾಕ ತಾಲೂಕಾ ಘಟಕದ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಮಹಾದೇವಿ ಮೈಲಾರಲಿಂಗ ಉಪ್ಪಿನ, ಯುವ ಘಟಕದ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಶಿವಪುತ್ರಪ್ಪ ಶೆಟ್ಟಿ, ಶ್ರೀಮತಿ ಪೂರ್ಣಿಮಾ ...

ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್ ಠೇವಣಿದಾರರಿಗೆ ವಿಪ್ರತೃಯಿ ಪರಿಷತ್ ಸಕಲ ನೆರವು

Image
  ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್ ಠೇವಣಿದಾರರಿಗೆ ವಿಪ್ರತೃಯಿ ಪರಿಷತ್ ಸಕಲ ನೆರವು ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ವಿಪ್ರತೃಯಿ ಪರಿಷತ್ ತುರ್ತು ಸಭೆಯಲ್ಲಿ, ಸಂಕಷ್ಟಕ್ಕೆ ಸಿಲುಕಿರುವ ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್ ಠೇವಣಿದಾರರ ಹಿತರಕ್ಷಣೆಗೆ ಧಾವಿಸುವ ನಿರ್ಣಯ ಕೈಗೊಳ್ಳಲಾಯಿತು. ರಾಜ್ಯ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಎನ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆದ ಸಭೆಯಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಮತ್ತು ವಿಪ್ರತೃಯಿ ಪರಿಷತ್ ಅಧ್ಯಕ್ಷ ರಘುನಾಥ್ ಸೇರಿದಂತೆ ಅನೇಕ ಬ್ರಾಹ್ಮಣ ಸಮಾಜದ ಪ್ರಮುಖರು ಭಾಗವಹಿಸಿದ್ದರು. ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚ್ಚಿದಾನಂದ ಮೂರ್ತಿ ಅವರು, ದಿವಾಳಿ ಅಂಚಿನಲ್ಲಿ ಸಿಲುಕಿರುವ ನ್ಯಾಷನಲ್ ಕೋ-ಆಪರೇಟಿವ್ ಬ್ಯಾಂಕ್ ನ ಪುನರುಜ್ಜೀವನ ಮಾಡುವುದು ಸೇರಿದಂತೆ, ಠೇವಣಿದಾರರ ಸಂಪೂರ್ಣ ಹಿತ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಪ್ರಯತ್ನ ಮಾಡಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ಠೇವಣಿದಾರರಿಗೆ ಆರ್ಥಿಕ ನೆರವು, ಕಾನೂನು ಸಲಹೆ ಮತ್ತು ನೈತಿಕ ಬೆಂಬಲ ನೀಡಲಾಗುವುದು ಎಂದರು... ವಿಪ್ರತೃಯಿ ಪರಿಷತ್ ಅಧ್ಯಕ್ಷ ರಘುನಾಥ್ ಮಾತನಾಡಿ, ಠೇವಣಿದಾರರಿಗೆ ಐದು ಲಕ್ಷ ರೂಪಾಯಿ ವಿಮೆ ಯೋಜನೆ ಹಣ ದೊರೆಯಲಿದೆ. ಜೊತೆಗೆ ವಿಪ್ರತೃಯಿ ಪರಿಷತ್ ವತಿಯಿಂದ ತೀರಾ ತೊಂದರೆಗೆ ಒಳಗಾಗಿರುವ ಠೇವಣಿದಾರರಿಗೆ ಆರ್ಥಿಕ ನೆರವು, ಕಾನೂನು ಅರಿವು ಮತ್ತು ನೈ...

ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಅವರಿಗೆ ಜೀವಮಾನದ ಸಾಧನೆ ಪ್ರಶಸ್ತಿ

Image
ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಅವರಿಗೆ ಜೀವಮಾನದ ಸಾಧನೆ ಪ್ರಶಸ್ತಿ -  ಎನ್‌ಎಟಿಎಸ್       ಜೂನ್ ೨೦೨೩: ಇನ್ಫೋಸಿಸ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷ ಎನ್ ಆರ್ ನಾರಾಯಣ ಮೂರ್ತಿ ಮತ್ತು ಪ್ರಸಿದ್ಧ ಲೇಖಕಿ ಮತ್ತು ಜನಪರವಾದಿ ಸುಧಾ ಮೂರ್ತಿ ಅವರ ಅಸಾಧಾರಣ ಕೊಡುಗೆಗಳಿಗಾಗಿ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇತ್ತೀಚೆಗೆ ಅಮೇರಿಕಾದ ನ್ಯೂಜೆರ್ಸಿಯಲ್ಲಿ ನಡೆದ ೭ ನೇ ತೆಲುಗು ಸಂಭ್ರಮಾಚರಣೆಯ ಸಂದರ್ಭದಲ್ಲಿ ಎನ್‌ಎಟಿಎಸ್ (ಉತ್ತರ ಅಮೇರಿಕಾ ತೆಲುಗು ಸೊಸೈಟಿ) ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಿದೆ. ಇನ್ಫೋಸಿಸ್ ದಂಪತಿಗಳು ಈ ಗೌರವಕ್ಕಾಗಿ ಸಂತೋಷ ಮತ್ತು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ, ಈ ದಂಪತಿಗಳಿಗೆ ಪ್ರಶಸ್ತಿ ನೀಡುವುದು ನಮ್ಮ ಸೌಭಾಗ್ಯವೆಂದು ಎನ್‌ಎಟಿಎಸ್ ಹೇಳಿದೆ.        ಎನ್‌ಎಟಿಎಸ್ ೭ ನೇ ತೆಲುಗು ಸಂಭ್ರಮದ ಸಂಚಾಲಕ ಶ್ರೀಧರ್ ಅಪ್ಪಾಸಾನಿ, "ಇಂತಹ ಮಹಿಮಾತೀತ ವ್ಯಕ್ತಿಗಳು ಪ್ರಶಸ್ತಿ ಸ್ವೀಕರಿಸುವ ಮೊದಲು ಸಂಸ್ಥೆಯ ಬಗ್ಗೆ ತಮ್ಮದೇ ಆದ ಮೌಲ್ಯಮಾಪನ ಮಾಡುತ್ತಾರೆ. ಭಾರತದ ಈ ಅತ್ಯಂತ ಗೌರವಾನ್ವಿತ ದಂಪತಿಗಳನ್ನು ಗೌರವಿಸುವ ಅವಕಾಶ ನಾವು ಪಡೆದಿರುವುದು ನಿಜಕ್ಕೂ ನಮ್ಮ ಅದೃಷ್ಟ ಮತ್ತು ತೆಲುಗು ಸಮಾವೇಶಗಳ ಇತಿಹಾಸದಲ್ಲಿ ಈ ರೀತಿಯ ಕಾರ್ಯಕ್ರಮಗಳು ಶ್ರೇಷ್ಠತೆಯನ್ನು ಎತ್ತಿ ತೋರುತ್ತದೆ” ಎಂದರು.        ತನ್ನ ೭ ನೇ ತೆಲ...

ಬಿಬಿಎಂಪಿ ನಿವೃತ್ತಿಯಾದ ಅಧಿಕಾರಿ ಹಾಗೂ ನೌಕರರಿಗೆ ಗೌರವ ಸನ್ಮಾನ

Image
 ಬಿಬಿಎಂಪಿ ನಿವೃತ್ತಿಯಾದ ಅಧಿಕಾರಿ ಹಾಗೂ ನೌಕರರಿಗೆ ಗೌರವ ಸನ್ಮಾನ ಬೆಂಗಳೂರು : ವುಡ್ ಲ್ಯಾಂಡ್ ಹೋಟೆಲು ಸಭಾಂಗಣದಲ್ಲಿ ಮೇ ತಿಂಗಳಲ್ಲಿ ವಯೋ ನಿವೃತ್ತಿಯಾದ ಅಧಿಕಾರಿ ಮತ್ತು ನೌಕರರಿಗೆ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಸನ್ಮಾನ ಸಮಾರಂಭ.       ಉಪ ಆಯುಕ್ತರಾದ ಮಂಜುನಾಥ್ ರವರು, ಸಹಾಯಕ ಆಯುಕ್ತರಾದ ಶ್ರೀನಿವಾಸ್,ಜಂಟಿಆಯುಕ್ತರಾದ ವೆಂಕಟಚಲಪತಿ, ಉಪ ಆಯುಕ್ತರಾದ ಶ್ರೀನಿವಾಸ್, ಮುಖ್ಯ ಅಭಿಯಂತರಾದ ವಿಶ್ವನಾಥ್, ಪ್ರಾಂಶುಪಾಲರಾದ ರವೀಂದ್ರ,ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷರಾದ ಎ.ಅಮೃತ್ ರಾಜ್ ರವರು ದೀಪ ಬೆಳಗಿಸಿ ಬೀಳ್ಕೊಡುಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.        ಬಿಬಿಎಂಪಿ ಮೇ ತಿಂಗಳಲ್ಲಿ ನಿವೃತ್ತಿಯಾದ 52ಅಧಿಕಾರಿ, ನೌಕರರಿಗೆ ಸನ್ಮಾನಿಸಲಾಯಿತು. ಜನ ಸೇವೆಯೆ ಜನಾರ್ಧನ ಸೇವೆ ಅಂದರೆ ದೇವರ ಸೇವೆ ಮಾಡಿದಂತೆ , ತಮ್ಮ ಜೀವನ ಬಹುಪಾಲು ಸಮಯವನ್ನು ನಗರ ಅಭಿವೃದ್ದಿ ಮತ್ತು ಜನರ ಸಮಸ್ಯೆ ನಿವಾರಣೆಗಾಗಿ ಹಗಲಿರುಳು ಶ್ರಮಿಸಿದ ಅಧಿಕಾರಿ ಮತ್ತು ನೌಕರರಿಗೆ ಗೌರವ ಸನ್ಮಾನ ನೀಡಿ, ಗೌರವಪೂರ್ವಕವಾಗಿ ಬೀಳ್ಕೊಡುಗೆ ಮಾಡಿದಾಗ ಅವರ ಸೇವೆಯನ್ನ ಸ್ಮರಣ ಮಾಡಿದಾಗ ಜೀವನ ಸಾರ್ಥಕವಾಗುತ್ತದೆ.        ಪ್ರತಿಯೊಬ್ಬ ಜೀವನದಲ್ಲಿ ವಯಸ್ಸು ಆಗುತ್ತದೆ, ವಯೋಸಹಜ ನಿವೃತ್ತಿ ಸಹಜ. ವಯಸ್ಸು ಆಯಿತು, ನಿಮ...

ಜಾಗತಿಕ ಗುಚ್ಚಿ ಬ್ರ್ಯಾಂಡ್ ರಾಯಭಾರಿಯಾಗಿ ಆಲಿಯಾ ಭಟ್ ನೇಮಕ

Image
ಜಾಗತಿಕ ಗುಚ್ಚಿ ಬ್ರಾಂಡ್ ರಾಯಭಾರಿಯಾಗಿ ನಟಿ ಮತ್ತು ನಿರ್ಮಾಪಕಿ ಆಲಿಯಾ ಭಟ್ ನೇಮಕ ಬೆಂಗಳೂರು - ಆಲಿಯಾ ಭಟ್ ತನ್ನ ಸಮಕಾಲೀನರ ಅತ್ಯಂತ ಪ್ರೀತಿಪಾತ್ರ ಮತ್ತು ಪ್ರತಿಭಾವಂತ ನಟಿಯಾಗಿ ತನ್ನನ್ನು ತಾನು ಸ್ಥಾಪಿಸಿಕೊಂಡಿದ್ದಾಳೆ, ಭಾರತೀಯ ಚಲನಚಿತ್ರೋದ್ಯಮದಲ್ಲಿ ಸತತವಾಗಿ ಯಶಸ್ಸು ಕಂದುಕೊಳ್ಳಿತ್ತಿದ್ದಾರೆ. ಪ್ರಪಂಚದಾದ್ಯಂತ ಅಭಿಮಾನಿಗಳ ಹೃದಯವನ್ನು ಗೆದ್ದಿದ್ದಾರೆ.     ನಿರ್ಮಾಪಕಿಯಾಗಿ ನೆಟ್‌ಫ್ಲಿಕ್ಸ್‌ನ ಚೊಚ್ಚಲ ಚಲನಚಿತ್ರ ಡಾರ್ಲಿಂಗ್ಸ್ ನಿರ್ಮಿಸಿದ್ದಾರೆ. RRR ಚಲನಚಿತ್ರದಲ್ಲಿ ಅತ್ಯುತ್ತಮ ಅಭಿನಯ ಮಾಡಿ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಇದು ಇಂಗ್ಲಿಷ್ಯೇತರ ಭಾಷೆ ವಿಭಾಗದಲ್ಲಿ ಅತ್ಯುತ್ತಮ ಚಿತ್ರಕ್ಕಾಗಿ ನಾಮನಿರ್ದೇಶನಗೊಂಡಿದೆ. ಆಲಿಯಾ ನೆಟ್‌ಫ್ಲಿಕ್ಸ್‌ನ ಹಾರ್ಟ್ ಆಫ್ ಸ್ಟೋನ್‌ನಲ್ಲಿ ನಟಿಸಲಿದ್ದಾರೆ.           ಮಧ್ಯಮದಲ್ಲಿ ಅವರು ಹಲವಾರು ಪ್ರತಿಷ್ಠಿತ ಪ್ರಶಸ್ತಿ ಗರಿಗಳ ಜೊತೆ ಹಲವಾರು ಸಾಧನೆಗಳನ್ನು ಮಾಡಿದ್ದಾರೆ. ಅವರು ಪ್ರತಿಷ್ಠಿತ ಟೈಮ್ 100 ಪ್ರಶಸ್ತಿಯನ್ನು ಮನೋರಂಜನೆ ವಿಭಾಗದಲ್ಲಿ ತಮ್ಮ ಮೂಡಿಗೇರಿಸಿಕೊಂಡಿದ್ದಾರೆ.           ದಕ್ಷಿಣ ಕೊರಿಯಾದ ಸಿಯಾಲ್ ನಲ್ಲಿ ಗ್ಯೆನ್ಗ್  ಬೋಕೆಗುಂಗ್ ಪ್ಯಾಲೇಸ್ ನಲ್ಲಿ ಮೇ 16ರಂದು  ನಡೆಯುವ  ಪ್ರತಿಷ್ಠಿತ ಗುಚ್ಚಿ ಕ್ರಯ್ಸ್ 2024 ಫ್ಯಾಷನ್ ಶೋ ಗೆ ರಾಯಭಾರಿಯಾಗಿ ಕಾಣಿಸಿಕೊಳ್ಳಲಿದ್...

ಚುನಾವಣೆಯಲ್ಲಿ ಹೆಚ್ಚಿನ ಬಹುಮತದೊಂದಿಗೆ ಬೆಂಬಲ ನೀಡಿ : ಕೆ.ಗೋಪಾಲಯ್ಯ

Image
ಚುನಾವಣೆಯಲ್ಲಿ ಹೆಚ್ಚಿನ ಬಹುಮತದೊಂದಿಗೆ ಬೆಂಬಲ ನೀಡಿ : ಕೆ.ಗೋಪಾಲಯ್ಯ ಬೆಂಗಳೂರು : 10 ರಂದು ಚುನಾವಣೆ ನಡೆಯಲಿದ್ದು, ಮತ್ತೊಮ್ಮೆ ಭಾರತೀಯ ಜನತಾ ಪಕ್ಷಕ್ಕೆ ಮಹಾಲಕ್ಷ್ಮಿ ಲೇಔಟ್ ನಲ್ಲಿ ಮತ್ತಷ್ಟು ಅಭಿವೃದ್ಧಿಗಾಗಿ ಈ ಬಾರಿ ಚುನಾವಣೆಯಲ್ಲಿ  ಹೆಚ್ಚಿನ ಬಹುಮತ ದೊಂದಿಗೆ ಬೆಂಬಲ ನೀಡಿ ಎಂದು ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ತಿಳಿಸಿದರು. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಕೃಷ್ಣಾನಂದ ನಗರ  ಏಕ್ಸ್ಪೋರ್ಟಿಂಗ್ ಸಿಂಡಿಕೇಟ್  ಪ್ರೈವೇಟ್ ಗಾರ್ಮೆಂಟ್ಸ್ ನಲ್ಲಿ ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ ಗೋಪಾಲಯ್ಯರವರು ಸಭೆ ನಡೆಸಿ ಅವರು ಮಾತನಾಡಿದರು. ಕೋವಿಡ್ ನಂತಹ ಮಹಾಮಾರಿ ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವ ಬಿಜೆಪಿ ಸರ್ಕಾರವು ಜನಸಾಮಾನ್ಯರಿಗೆ ಆಕ್ಸಿಜನ್  ಹಾಗೂ ಉಚಿತ ಲಸಿಕೆಯನ್ನು ಒದಗಿಸಲಾಗಿದೆ ಎಂದರು. ಕೋವಿಡ್ ಅವಧಿಯಲ್ಲಿ  350 ಕ್ಕೂ ಹೆಚ್ಚಿನ ಆಕ್ಸಿಜನ್ ಸಿಲಿಂಡರ್ ಗಳನ್ನು ನೀಡಿ ಕ್ಷೇತ್ರದ ಜನತೆಯ ಉಳಿವಿಗಾಗಿ ಶ್ರಮವಹಿಸಿ ಕಾರ್ಯನಿರ್ವಹಣೆ ಹೀಗೆ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಕ್ಷೇತ್ರವನ್ನು ಇನ್ನೂ ಅಭಿವೃದ್ಧಿ ಮಾಡಲು ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು. ಕ್ಷೇತ್ರದಲ್ಲಿ ಕುಡಿಯುವ ನೀರಿನ ಘಟಕ, ನವ ನಂದಿನಿ ಪಾರ್ಕ್, ಆರೋಗ್ಯದ ಕಾಳಜಿಯಿಂದ ಉತ್ತಮ ಆಸ್ಪತ್ರೆಗಳು, ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರಿ ಶಾಲ...

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.‌ ಗೋಪಾಲಯ್ಯ ಪ್ರಚಾರ

Image
ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.‌ ಗೋಪಾಲಯ್ಯ ಪ್ರಚಾರ ಬೆಂಗಳೂರು : ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.‌ಗೋಪಾಲಯ್ಯ ರವರು ಇಂದು 68 ನೇ ವಾರ್ಡ್ ನ ಶ್ರೀರಾಮನಗರದ  ಗೆಳೆಯರ ಬಳಗ ರಸ್ತೆಯಲ್ಲಿ ಮನೆ ಮನೆಗೆ ತೆರಳಿ ಅಭಿವೃದ್ಧಿಗೆ ಮತ ನೀಡಿ ಎಂದು ಮತಯಾಚನೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ರವರು ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ಮಾಡಿದ್ದಾರೆ. ಒಂದು ಲಕ್ಷಕ್ಕಿಂತ ಹೆಚ್ಚಿನ ಜನರು ಅವರನ್ನ ಹತ್ತಿರದಿಂದ ಬಂದು ನೋಡಿ ಕಣ್ತುಂಬಿ ಕೊಂಡಿದ್ದಾರೆ ಎಂದರು. ಕ್ಷೇತ್ರದ ಜನತೆ ಅತ್ಯಂತ ಯಶಸ್ವಿಯಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಸ್ವಾಗತ ಮಾಡಿದರು.ನನ್ನ ಕ್ಷೇತ್ರದ ಜನತೆಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು. 270 ಬೂತ್ ನಲ್ಲೂ ನಮ್ಮ ಮುಖಂಡರು ಹಾಗೂ ಸ್ಥಳೀಯ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಈ ಬಾರಿ  ಕ್ಷೇತ್ರದ ಜನತೆ ಹೆಚ್ಚಿನ ಬಹುಮತದೊಂದಿಗೆ ಗೆಲ್ಲಿಸುತ್ತಾರೆ ಎಂಬ ನಂಬಿಕೆ ಇದೆ ಎಂದರು. ಬೆಂಗಳೂರಿನಲ್ಲಿ ಪ್ರಧಾನಿ ಮೋದಿಯವರ ರೋಡ್ ಶೋ ಆಗಿದೆ. ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳು,ವಿಶ್ವ ನಾಯಕ ಪ್ರಧಾನಿ ಮೋದಿಯವರ ನಾಯಕತ್ವ ಅವರ ಕೊಡುಗೆ ಅಪಾರ ಎಂದರು. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಬಿಜೆಪಿ ಅಧಿಕಾರಕ್ಕೆ ಬರಬೇಕಂತ ಜನರ ಬಯಕೆಯಿದೆ. ಬೆಂಗಳೂರಿನಲ್ಲಿ 20ಕ್ಕಿಂತ ಹೆಚ್ಚಿನ ಸ್ಥಾನ  ಗೆಲ್ಲುತ್ತ...

ಹುಲ್ಲಹಳ್ಳಿ ಶ್ರೀನಿವಾಸ್ ರವರ ಪರ ಕೆ. ಗೋಪಾಲಯ್ಯ ಭರ್ಜರಿ ಮತ ಪ್ರಚಾರ

Image
ಹುಲ್ಲಹಳ್ಳಿ ಶ್ರೀನಿವಾಸ್ ರವರ ಪರ   ಕೆ. ಗೋಪಾಲಯ್ಯ ಭರ್ಜರಿ ಮತ ಪ್ರಚಾರ ಬೆಂಗಳೂರು ಗ್ರಾಮಾಂತರ : ಆನೇಕಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹುಲ್ಲಹಳ್ಳಿ ಶ್ರೀನಿವಾಸ್  ರವರು  ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಭ್ಯರ್ಥಿ. ಅವರ ಭಾವಚಿತ್ರ ಇಡಿದು  ಮತವನ್ನು ಕೇಳಿದ್ದೇವೆ. ಕ್ಷೇತ್ರದ ಜನರು ಹೆಚ್ಚಿನ ಬಹುಮತವನ್ನು ನೀಡಿ ಅವರನ್ನು ಗೆಲ್ಲಿಸಬೇಕು ಎಂದು ಸ್ಥಳೀಯ ಶಾಸಕರು ಅಬಕಾರಿ ಸಚಿವರಾದ ಕೆ ಗೋಪಾಲಯ್ಯರವರು ಮನವಿ ಮಾಡಿದರು.        ಬೆಂಗಳೂರು ಗ್ರಾಮಾಂತರ ಆನೇಕಲ್ ತಾಲೂಕಿನಲ್ಲಿ ಹುಲ್ಲಹಳ್ಳಿ ಶ್ರೀನಿವಾಸ್ ರವರ ಪರವಾಗಿ ಮತಯಾಚನೆ ನಡೆಸಿ ಅವರು ಮಾತನಾಡಿದರು. ಇಡೀ ರಾಜ್ಯದಲ್ಲಿ ಒಕ್ಕಲಿಗ ಸಮುದಾಯ  ಪ್ರಬಲವಾದ ಸಮುದಾಯ. ಬೆಂಗಳೂರಿನ ನಾಡಪ್ರಭು ಕೆಂಪೇಗೌಡರು ಕಟ್ಟಿರುವಂತಹ ಇತಿಹಾಸವನ್ನು ಸೂರ್ಯ ಹಾಗೂ ಚಂದ್ರ ಇರುವವರೆಗೂ ಸಾಧ್ಯವಿಲ್ಲ ಎಂದರು.                 ಪ್ರತಿನಿತ್ಯ ನಾಡಪ್ರಭು ಕೆಂಪೇಗೌಡರನ್ನು  ನಾವೆಲ್ಲರೂ ಪ್ರತಿನಿತ್ಯ ಪೂಜೆ ಮಾಡಬೇಕು ಒಕ್ಕಲಿಗ ಸಮುದಾಯ ಒಂದು ಜಾತಿಗೆ ಸೀಮಿತವಾಗದೆ ಸಹಾಯ ಮಾಡುವುದಿಲ್ಲ.  ಕಷ್ಟಪಟ್ಟು ದುಡಿಯುವುದು ನಾವೆಲ್ಲರೂ ರೈತ ಕುಟುಂಬದವರು ಎಂದರು.            ಅನೇಕ ಸಮುದಾಯಗಳಿಗೆ ಆಶ್ರಯವನ್ನು ಕೊಟ್ಟು ಇವತ್ತು ರಾಜ್ಯದಲ್ಲಿ ಕೆಂಗಲ್ ಹನುಮಂತಯ್ಯ...

ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಪರ ಸಚಿವ ಕೆ.ಗೋಪಾಲಯ್ಯ ರೋಡ್ ಶೋ

Image
ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಪರ  ಸಚಿವ ಕೆ.ಗೋಪಾಲಯ್ಯ ರೋಡ್ ಶೋ ಬೆಂಗಳೂರು : ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಿವನಗರದಲ್ಲಿ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯರವರು ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಪರ ಬೃಹತ್ ರೋಡ್ ಶೋ ನಡೆಸಿದರು.      ಗುಜರಾತ್ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಭಾಯಿ ಪಟೇಲ್, ಮಾಜಿ ಶಾಸಕ ನೆ.ಲ.ನರೇಂದ್ರಬಾಬು, ಮಂಡಲ ಬಿಜೆಪಿ ಅಧ್ಯಕ್ಷರಾದ ರಾಘವೇಂದ್ರರಾವ್,ಮಾಜಿ ಉಪಮಹಾಪೌರರಾದ ರಂಗಣ್ಣ, ಬಿಜೆಪಿ ಮುಖಂಡರು, ಚಲನಚಿತ್ರ ನಿರ್ಮಾಪಕರಾದ ಗಂಗಾಧರ್ , ಮಾಜಿ ಪಾಲಿಕೆ ಸದಸ್ಯೆ ದೀಪಾ ನಾಗೇಶ್ ಸಾವಿರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು     ಇದೇ ಸಂದರ್ಭದಲ್ಲಿ ಎಸ್.ಸುರೇಶ್ ಕುಮಾರ್ ರವರು ಮಾತನಾಡಿ ವಿಶ್ವದ ಬಲಿಷ್ಠ ಪ್ರಧಾನಿ ನರೇಂದ್ರ ಮೋದಿರವರ 9ವರ್ಷದ ಆಡಳಿತ ಮತ್ತು ರಾಜ್ಯ ಸರ್ಕಾರದ ಪಾರದರ್ಶಕ ಆಡಳಿತ, ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕೈಗೊಂಡ ಕಾಮಗಾರಿಗಳ ಮೇಲೆ ಮತಯಾಚನೆ ಮಾಡಲಾಗುತ್ತಿದೆ. ಮತದಾರರು ಬಿಜೆಪಿ ಪಕ್ಷದ ಜನಪರ ಆಡಳಿತ ನೋಡಿ ದೇಶ ರಕ್ಷಣೆ ಮತ್ತು ಅಭಿವೃದ್ದಿ ಬಿಜೆಪಿ ಪಕ್ಷದಿಂದ ಮಾತ್ರ ಸಾಧ್ಯ ಎಂದು ಸ್ವಯಂಪೇರಿತರಾಗಿ ಭಾಗವಹಿಸುತ್ತಿದ್ದಾರೆ.        ಕಾಂಗ್ರೆಸ್ ಪಕ್ಷವನ್ನು ದೇಶದ ಜನರು ತಿರಸ್ಕಾರ ಮಾಡಿದ್ದಾರೆ, ಕಾಂಗ್ರೆಸ್ ಪಕ್ಷ 65ವರ್ಷ ಈ ದೇಶವನ್ನು ಲೂಟಿ ಮಾಡಿದರು ಎಂದು ಹೇಳಿದರು. ರಾಜ...

ಬಿಜೆಪಿ ಅಭ್ಯರ್ಥಿ ಕೆ. ಗೋಪಾಲಯ್ಯರವರ ಪರ ಬಿ. ನಾರಾಯಣ ಸ್ವಾಮಿ ಮತಯಾಚನೆ

Image
ಬಿಜೆಪಿ ಅಭ್ಯರ್ಥಿ ಕೆ. ಗೋಪಾಲಯ್ಯ ಪರ  ಬಿ. ನಾರಾಯಣ ಸ್ವಾಮಿ ಮತಯಾಚನೆ ಬೆಂಗಳೂರು : ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ನಂದಿನಿ ಲೇಔಟ್ ವಾರ್ಡ್ ನ ಕಂಠೀರವ ನಗರದ ಹಲವು ಏರಿಯಾ ಗಳಲ್ಲಿ  ಕ್ಷೇತ್ರದ ಬಿಜೆಪಿ ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಬಿ,ನಾರಾಯಣ ಸ್ವಾಮಿ  ಅವರ ನೇತೃತ್ವದಲ್ಲಿ ಜಾಗೃತಿ ಮಹಿಳಾ ಸಂಘ ಹಾಗೂ ಸ್ಥಳೀಯ ಬಿಜೆಪಿ ಕಾರ್ಯಕರ್ತರ ಸಹಯೋಗದಲ್ಲಿ ಮಹಾಲಕ್ಷ್ಮೀ ಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ, ಗೋಪಾಲಯ್ಯ ಪರ ಮತಯಾಚನೆ ನಡೆಸಿದರು.       ಕ್ಷೇತ್ರದ ಜನರ ನಡುವೆ ಜನ ನಾಯಕರಾಗಿ ಸಚಿವ ಕೆ.ಗೋಪಾಲಯ್ಯ ರವರು ತಮ್ಮ ಅಭಿವೃದ್ಧಿ ಕಾರ್ಯಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಎಲ್ಲಿ ಹೋದರೂ ಜನರು ತಾವೇ ಸ್ವತಃ ಮುಂದೆ ಬಂದು ನಮ್ಮ ಮತ ಕೆ, ಗೋಪಾಲಯ್ಯ ನವರಿಗೆ ಎಂದು ಹೇಳುತ್ತಿರುವುದು ಕಂಡು ಬಂತು. ಈ ಸಂದರ್ಭದಲ್ಲಿ ಮಾತನಾಡಿದ ಬಿ, ನಾರಾಯಣ ಸ್ವಾಮಿ ಅವರು ಸರ್ವ ಜನಾಂಗದ ಶಾಂತಿಯ ತೋಟ ಎಂಬ ಕುವೆಂಪು ಅವರ ಮಾತಿನಂತೆ ಈ ಕ್ಷೇತ್ರದಲ್ಲಿ ಎಲ್ಲ ವರ್ಗದ ಜನರ ಹಿತ ಕಾಯುವ ಕಾಯಕಯೋಗಿ ಸನ್ಮಾನ್ಯ ಶ್ರೀ ಗೋಪಾಲಯ್ಯ ನವರು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿರುವ ಗೋಪಾಲಯ್ಯ ಅವರ ಗೆಲುವು ಖಚಿತ ಎಂದ ನಾರಾಯಣ ಸ್ವಾಮಿ ಅವರು ನಮ್ಮ ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ಗಳಾದ ಶ್ರೀ ನರೇಂದ್ರ ಮೋದಿಯವರು, ಅಮಿತ್ ಷಾ, ನಡ್ಡಾ ಜೀ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ಯಡಿಯೂರ...

ಸಚಿವ ಕೆ. ಗೋಪಾಲಯ್ಯ ಮತ ಯಾಚನೆ

Image
  ಕೂಲಿ ಕಾರ್ಮಿಕರ ಸಭೆಯಲ್ಲಿ ಭಾಗವಹಿಸಿ   ಸಚಿವ ಕೆ. ಗೋಪಾಲಯ್ಯ ಮತ ಯಾಚನೆ ಬೆಂಗಳೂರು : ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ಮಾರಪ್ಪನ ಪಾಳ್ಯ ವಾರ್ಡ್ ನಲ್ಲಿರುವ ಆರ್ ಎಂ ಸಿ ಯಾರ್ಡ್ ನಲ್ಲಿ ಇಂದು ಇಲ್ಲಿಯ ಮಾರುಕಟ್ಟೆ ವರ್ತಕರು ಹಾಗೂ ವ್ಯಾಪಾರಸ್ಥರು, ಹಾಗೂ ಕೂಲಿ ಕಾರ್ಮಿಕರ ಸಭೆಯಲ್ಲಿ ಭಾಗವಹಿಸಿ ಸಚಿವ ಕೆ ಗೋಪಾಲಯ್ಯ ಮತ ಯಾಚನೆ ಮಾಡಿದರು.  ಒಂದು ಮಾರುಕಟ್ಟೆ ದಾಸನಪೂರ ಕ್ಕೆ ತೆರವು ಮಾಡಬೇಕು ಎಂದು ಅಂದು ಹೇಳಿದಾಗ ನಾನು ಮುಂದೆ ನಿಂತು ನಿಮ್ಮ ಕಷ್ಟ ಹಾಗೂ ಬವಣೆ ನೀಗಿಸಲು ನಾನು ಅಂದು ಹೆದ್ದಾರಿ ತಡೆ ಮಾಡಿ ಈ ಸ್ಥಳದಲ್ಲಿರುವ ನಿಮ್ಮೆಲ್ಲರ ಅಂಗಡಿ ಮುಗ್ಗಟ್ಟುಗಳು ತೆರವು ಮಾಡದಂತೆ ಹೋರಾಟ ಮಾಡಿ ಉಳಿಸಿರುವೆ, ಜೊತೆಗೆ ನಿಮ್ಮ ಮಕ್ಕಳ ಶೈಕ್ಷಣಿಕ ಉದ್ಧಾರಕ್ಕಾಗಿ ಕ್ಷೇತ್ರದಲ್ಲಿ ಒಳ್ಳೆಯ ಗುಣಮಟ್ಟದ ಶಾಲೆ ಅಭಿವೃದ್ಧಿ ಮಾಡಿ ಉಚಿತ ಶಿಕ್ಷಣ ನೀಡುವಲ್ಲಿ ನಾನು ಹಾಗೂ ನಮ್ಮ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಮುಂದಾಗಿದ್ದೇವೆ. ಜೊತೆಗೆ ಕೊರೋನ ಸಂಕಷ್ಟದಲ್ಲಿ ಫುಡ್ ಕಿಟ್ ಔಷಧಿ ಕಿಟ್ ಹಾಗೂ ಆಕ್ಸಿಜನ್  ಸೇರಿದಂತೆ ಹಲವು ರೀತಿಯ ಸಹಾಯ ಮಾಡಿದ್ದೇನೆ. ಮುಂಬರುವ 10 ನೇ ತಾರೀಖಿನ ದಿನ ತಾವೆಲ್ಲರೂ ತಪ್ಪದೆ ಭಾರತೀಯ ಜನತಾ ಪಕ್ಷದ ಚಿನ್ಹೆ ಕಮಲದ ಗುರುತಿಗೆ ಮತ ಚಲಾಯಿಸುವ ಮೂಲಕ ನಮ್ಮನ್ನ ಅತಿ ಹೆಚ್ಚಿನ ಮತಗಳಿಂದ ಗೆಲ್ಲಿಸಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳ ಮಾಡಲಿಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು....

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಅಣ್ಣಮಲೈ ರೋಡ್ ಶೋ

Image
ರಾಜ್ಯ ಬಿಜೆಪಿ ಉಸ್ತುವಾರಿ ಅಣ್ಣಾಮಲೈ ರೋಡ್ ಶೋ   ಕೆ. ಗೋಪಾಲಯ್ಯ ಪರ ಮತಯಾಚನೆ ಬೆಂಗಳೂರು : ಮೇ 2. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದದಲ್ಲಿಂದು ರಾಜ್ಯ ಬಿಜೆಪಿ ಉಸ್ತುವಾರಿಗಳಾದ ಅಣ್ಣಾಮಲೈ ರವರಿಂದ ರೋಡ್ ಶೋ ಕಾರ್ಯಕ್ರಮವುದಲ್ಲಿ ಮಾನ್ಯ ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ನವರು ಮಾತನಾಡಿದರು. ರೋಡ್ ಶೋ ಕಾರ್ಯಕ್ರಮವು ಡಾ.ರಾಜಕುಮಾರ್ ಪ್ರತಿಮೆ ಬಳಿಯಿಂದ ಜೆಸಿ ನಗರ,  ಕುರುಬರಹಳ್ಳಿ ಸರ್ಕಲ್ ಮಾರ್ಗವಾಗಿ ಸತ್ಯನಾರಾಯಣ ಚೌಲ್ಟ್ರಿ ಸರ್ಕಲ್ ವರೆಗೆ ನಡೆಯಿತು. ಕ್ಷೇತ್ರದಲ್ಲಿ ಈವರೆಗೆ ಮಾಡಿರುವಂತಹ ಅಭಿವೃದ್ಧಿ ಕಾರ್ಯಗಳು ಜನಸಾಮಾನ್ಯರಿಗೆ ಅರಿತಿದೆ. ಈ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯವನ್ನು ಕೈಗೊಂಡು ತಮ್ಮೆಲ್ಲರ ಕಲ್ಯಾಣಕ್ಕೆ ಸದಾ ಶ್ರಮಿಸುತ್ತೇನೆ. ಹಾಗಾಗಿ ಈ ಬಾರಿ ಚುನಾವಣೆಯಲ್ಲಿ ನನಗೆ ಬಹುಮತದಿಂದ  ಗೆಲ್ಲಿಸಬೇಕೆಂದು ಮನವಿ ಮಾಡಿದರು. ಜನಸಾಮಾನ್ಯರಿಗೆ ಕೋವಿಡ್ ಅವಧಿಯಲ್ಲಿ, ಉಚಿತವಾಗಿ ಆರೋಗ್ಯ ಕಿಟ್ ಹಾಗೂ ಆಹಾರ ಕಿಟ್, ಆಕ್ಸಿಜನ್, ಮಾತ್ರೆಗಳನ್ನು ನೀಡಿ ಜನಸಾಮಾನ್ಯರ ಸಂಕಷ್ಟದ ಪರಿಸ್ಥಿತಿಯಲ್ಲಿ ನನ್ನ ಜೊತೆ ಮುಖಂಡರು, ಕಾರ್ಯಕರ್ತರು ಹಗಲಿರುಳು ಶ್ರಮಿಸಿ ಕ್ಷೇತ್ರದ ಜನರ ಉಳಿವಿಗಾಗಿ ಬಹಳ ಕಾಳಜಿ ವಹಿಸಲಾಗಿದೆ ಎಂದರು. ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿ, ಜನಸಾಮಾನ್ಯರ ಅನುಕೂಲವಾಗುವ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಮೂರು ಬಾರಿ...