ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಪರ ಸಚಿವ ಕೆ.ಗೋಪಾಲಯ್ಯ ರೋಡ್ ಶೋ

ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಪರ ಸಚಿವ ಕೆ.ಗೋಪಾಲಯ್ಯ ರೋಡ್ ಶೋ ಬೆಂಗಳೂರು : ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಿವನಗರದಲ್ಲಿ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯರವರು ಬಿಜೆಪಿ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಪರ ಬೃಹತ್ ರೋಡ್ ಶೋ ನಡೆಸಿದರು. ಗುಜರಾತ್ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಭಾಯಿ ಪಟೇಲ್, ಮಾಜಿ ಶಾಸಕ ನೆ.ಲ.ನರೇಂದ್ರಬಾಬು, ಮಂಡಲ ಬಿಜೆಪಿ ಅಧ್ಯಕ್ಷರಾದ ರಾಘವೇಂದ್ರರಾವ್,ಮಾಜಿ ಉಪಮಹಾಪೌರರಾದ ರಂಗಣ್ಣ, ಬಿಜೆಪಿ ಮುಖಂಡರು, ಚಲನಚಿತ್ರ ನಿರ್ಮಾಪಕರಾದ ಗಂಗಾಧರ್ , ಮಾಜಿ ಪಾಲಿಕೆ ಸದಸ್ಯೆ ದೀಪಾ ನಾಗೇಶ್ ಸಾವಿರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು ಇದೇ ಸಂದರ್ಭದಲ್ಲಿ ಎಸ್.ಸುರೇಶ್ ಕುಮಾರ್ ರವರು ಮಾತನಾಡಿ ವಿಶ್ವದ ಬಲಿಷ್ಠ ಪ್ರಧಾನಿ ನರೇಂದ್ರ ಮೋದಿರವರ 9ವರ್ಷದ ಆಡಳಿತ ಮತ್ತು ರಾಜ್ಯ ಸರ್ಕಾರದ ಪಾರದರ್ಶಕ ಆಡಳಿತ, ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕೈಗೊಂಡ ಕಾಮಗಾರಿಗಳ ಮೇಲೆ ಮತಯಾಚನೆ ಮಾಡಲಾಗುತ್ತಿದೆ. ಮತದಾರರು ಬಿಜೆಪಿ ಪಕ್ಷದ ಜನಪರ ಆಡಳಿತ ನೋಡಿ ದೇಶ ರಕ್ಷಣೆ ಮತ್ತು ಅಭಿವೃದ್ದಿ ಬಿಜೆಪಿ ಪಕ್ಷದಿಂದ ಮಾತ್ರ ಸಾಧ್ಯ ಎಂದು ಸ್ವಯಂಪೇರಿತರಾಗಿ ಭಾಗವಹಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ದೇಶದ ಜನರು ತಿರಸ್ಕಾರ ಮಾಡಿದ್ದಾರೆ, ಕಾಂಗ್ರೆಸ್ ಪಕ್ಷ 65ವರ್ಷ ಈ ದೇಶವನ್ನು ಲೂಟಿ ಮಾಡಿದರು ಎಂದು ಹೇಳಿದರು. ರಾಜ...